newsfirstkannada.com

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಮಹಿಳೆ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

Share :

Published July 5, 2024 at 5:40pm

  ಟವೇರಾ ಹಾಗೂ ಎಲೆಕ್ಟ್ರಿಕ್ ಕಾರು ನಡುವೆ ಸಂಭವಿಸಿದ ಅಪಘಾತ

  ಹೊರವಲಯದ ಶರಣಸಿರಸಗಿ ಗ್ರಾಮದ ಬಳಿ ನಡೆದ ದುರ್ಘಟನೆ

  ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು

ಕಲಬುರಗಿ: ರಸ್ತೆ ತಿರುವಿನಲ್ಲಿ ವೇಗವಾಗಿ ಬಂದ ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಶರಣಸಿರಸಗಿ ಗ್ರಾಮದ ಬಳಿ ನಡೆದಿದೆ. ರಾಧಾ (65) ಮೃತ ದುರ್ದೈವಿ.

ಇದನ್ನೂ ಓದಿ: ಧ್ರುವ ಸರ್ಜಾ ಅವರ ಜಿಮ್ ಟ್ರೈನರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್.. ಅಸಲಿ ವಿಚಾರ ಬಯಲು..!

ಕಲಬುರಗಿ ನಗರದಿಂದ ಅಫಜಲಪುರ ಕಡೆ ಹೊರಟಿದ್ದ ಟವೇರಾ ಮತ್ತು ಅಫಜಲಪುರ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಎಲೆಕ್ಟ್ರಿಕ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಂಭೀರ ಗಾಯಗೊಂಡ ಇಬ್ಬರನ್ನು ನಗರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸಂಚಾರಿ ಪೊಲೀಸ್ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಮಹಿಳೆ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

https://newsfirstlive.com/wp-content/uploads/2024/07/kalaburagi-accident.jpg

Load More