/newsfirstlive-kannada/media/post_attachments/wp-content/uploads/2024/06/MYS-BNG-ACCIDENT.jpg)
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್ ವೇನಲ್ಲಿ ಸರಣಿ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಐದು ಕಾರುಗಳು ಜಖಂ ಆಗಿವೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಅವಘಡ ನಡೆದಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕೆಲವು ಕಾರುಗಳು ನುಜ್ಜುಗುಜ್ಜಾಗಿವೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು, ಅಪಘಾತ ಹೇಗೆ ಸಂಭವಿಸಿದೆ ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:Rain Alert: ರಾಜ್ಯದ 8 ಜಿಲ್ಲೆಗಳಲ್ಲಿ ಇಂದಿನಿಂದ ಭರ್ಜರಿ ಮಳೆ.. ಹವಾಮಾನ ಇಲಾಖೆ ಎಚ್ಚರಿಕೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us