/newsfirstlive-kannada/media/post_attachments/wp-content/uploads/2024/09/Mandya.jpg)
ಮಂಡ್ಯ: ಗೂಡ್ಸ್ ಆಟೋ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಮಣಿಗೆರೆ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 26 ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿ - ಮಳವಳ್ಳಿ ರಸ್ತೆಯಲ್ಲಿರುವ ಗ್ರಾಮದ ಬಳಿ ಭೀಕರ ದುರ್ಘಟನೆ ಸಂಭವಿಸಿದ್ದು, ಗೂಡ್ಸ್ ಆಟೋದಲ್ಲಿ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ.
/newsfirstlive-kannada/media/post_attachments/wp-content/uploads/2024/09/Mandya-1.jpg)
ಇದನ್ನೂ ಓದಿ: ಕೇರಳದಲ್ಲಿ MPOX ಕನ್ಫರ್ಮ್.. ಕರ್ನಾಟಕಕ್ಕೂ ಶುರುವಾಯ್ತು ಡೇಂಜರ್​​ ಮಹಾಮಾರಿ ಆತಂಕ..!
ಕಾರು ಮತ್ತು ಗೂಡ್ಸ್ ಆಟೋ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಗೊಂಡವರನ್ನು ತೊರೆಬೊಮ್ಮನಹಳ್ಳಿ ಗ್ರಾಮಸ್ಥರು ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿ: One Nation, One Election.. ಇದು ಮೋದಿ ಸರ್ಕಾರದ ದುಷ್ಠ ಉದ್ದೇಶ ಎಂದ ಸಿದ್ದರಾಮಯ್ಯ, ಡಿಕೆಶಿ ಏನಂದ್ರು..?
ಮದ್ದೂರು, ಮಂಡ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಗಾಯಗೊಂಡವರು ಬೆಂಗಳೂರಿಗೆ ರವಾನಿಸಲಾಗಿದೆ. ಕೆಎಂ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us