ದುರ್ಘಟನೆಯಲ್ಲಿ ನಾಲ್ವರಿಗೆ ಗಂಭೀರವಾಗಿ ಗಾಯ
ಶ್ರೀರಂಗಪಟ್ಟಣದ ನಗುವನಹಳ್ಳಿ ಗ್ರಾಮದಲ್ಲಿ ಅಪಘಾತ
ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಕೇಸ್
ಮಂಡ್ಯ: ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಕಾರು ಹೊತ್ತಿ ಉರಿದಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಎಸ್ಯುವಿ ಮಹೇಂದ್ರ ಕಾರಿನಲ್ಲಿ ಅನೇಕಲ್ ಮೂಲದ ಐವರು ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು ಕಾರು ಪಲ್ಟಿಯಾಗ್ತಿದ್ದಂತೆ ಕೆಳಗೆ ಬಿದ್ದು ನಿವೃತ್ತ ಯೋಧ ಸಾವನ್ನಪ್ಪಿದ್ದಾರೆ. ಕಿಶೋರ್ ಬಾಬು (47) ಸ್ಥಳದಲ್ಲೇ ಸಾವನ್ನಪ್ಪಿರುವ ನಿವೃತ್ತ ಯೋಧ.
ಕಾರಿನಲ್ಲಿ ಉಳಿದ ನಾಲ್ವರನ್ನು ಪೊಲೀಸರು, ಸಾರ್ವಜನಿಕರು ರಕ್ಷಣೆ ಮಾಡಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ