ನೆಲಮಂಗಲದ-ಬೂದಿಹಾಳ್ ಗೇಟ್ ಬಳಿ ದುರ್ಘಟನೆ
ಬೆಂಗಳೂರು ಮೂಲದ ವೈ.ಎಸ್. ವೆಂಕಟೇಶ್ ಸಾವು
ನೆಲಮಂಗಲ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ
ನೆಲಮಂಗಲ: ತಡರಾತ್ರಿ ತುಮಕೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ನೆಲಮಂಗಲದ-ಬೂದಿಹಾಳ್ ಗೇಟ್ ಬಳಿ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ನಿವಾಸಿ ವೈ.ಎಸ್. ವೆಂಕಟೇಶ್ (39) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ತುಮಕೂರು ಕಡೆಗೆ ತೆರಳುತ್ತಿದ್ದಾಗ ಅವಘಡ ನಡೆದಿದೆ.
ನೆಲಮಂಗಲ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ವೆಂಕಟೇಶ್ ಮೃತದೇಹವನ್ನು ರವಾನೆ ಮಾಡಲಾಗಿದೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ