ಬೈಕ್ ಓವರ್ ಟೇಕ್ ಮಾಡುವಾಗ ಸರಣಿ ಅಪಘಾತ
ಉಡುಪಿ ಜಿಲ್ಲೆ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ದುರ್ಘಟನೆ
ಘಟನಾ ಸ್ಥಳಕ್ಕೆ ಪಿಎಸ್ಐ ಮಹೇಶ್ ಭೇಟಿ, ಪರಿಶೀಲನೆ
ಉಡುಪಿ: ಓವರ್ ಟೇಕ್ ಮಾಡುವ ಆವೇಶದಲ್ಲಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ.
ಬೈಕನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿವೆ. ಸ್ಥಳಕ್ಕೆ ಹೆಬ್ರಿ ಪಿಎಸ್ಐ ಮಹೇಶ್ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ.
ಅಪಘಾತದಿಂದ ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ