ಬಸ್, ಕಾರು ಭೀಕರ ಅಪಘಾತದಲ್ಲಿ 10 ಮಂದಿ ಸಾವು;
ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಇನೋವಾ ಕಾರ್ ನಡುವೆ ಭೀಕರ ಅಪಘಾತ; ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಮೈಸೂರು: ಖಾಸಗಿ ಬಸ್ ಮತ್ತು ಇನೋವಾ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಕಾರಿನಲ್ಲಿದ್ದ 10 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸುಜಾತ, ಸಂದೀಪ್, ಮಂಜುನಾಥ್, ಪೂರ್ಣಿಮಾ, ಗಾಯತ್ರಿ, ಆದಿತ್ಯಾ, ಬಸವ, ಕೊಟ್ರೇಶ್ (45), ಪವನ್ (10), ಕಾರ್ತಿಕ್ (08) ಮೃತ ದುರ್ದೈವಿಗಳು. ಈ ಭೀಕರ ಅಪಘಾತವು ಕೊಳ್ಳೇಗಾಲ ಮುಖ್ಯರಸ್ತೆಯ ಕುರುಬೂರು ಗ್ರಾಮದ ಬಳಿ ಸಂಭವಿಸಿದೆ.
ಇದನ್ನು ಓದಿ: ಖಾಸಗಿ ಬಸ್, ಇನೋವಾ ಕಾರ್ ನಡುವೆ ಭೀಕರ ಅಪಘಾತ; ಸಾವಿನ ಸಂಖ್ಯೆ 10ಕ್ಕೆ ಏರಿಕೆ!
ಇನ್ನು, ಭೀಕರ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಈ ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂಪಾಯಿ 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
– ಮುಖ್ಯಮಂತ್ರಿ ಸಿದ್ದರಾಮಯ್ಯ
https://twitter.com/CMofKarnataka/status/1663158417324904448?s=20
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ