/newsfirstlive-kannada/media/post_attachments/wp-content/uploads/2025/04/Mysore-Road-Accident-2.jpg)
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ KSRTC ಐರಾವತ ಬಸ್ ಕಾರಿಗೆ ಡಿಕ್ಕಿಯಾಗಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ಈ ದಾರುಣ ಘಟನೆ ನಡೆದಿದೆ. ಎಕ್ಸ್‌ಪ್ರೆಸ್ ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಆಗಿದೆ. ಅದೇ ಗೊಂದಲದಿಂದ ಮತ್ತೆ ಎಕ್ಸ್‌ಪ್ರೆಸ್ ವೇಗೆ ಕಾರು ತಿರುಗಿಸಲಾಗಿದೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ KSRTC ಐರಾವತ ಬಸ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಬೆಂಗಳೂರು ಜೆ.ಪಿ ನಗರದ ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಮೈಸೂರಿನ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದರು. ಸತ್ಯಾನಂದರಾಜೇ ಅರಸ್, ಪತ್ನಿ ನಿಶ್ಚಿತ, ಚಂದ್ರು, ಸುಮೇದಿನಿ ರಾಣಿ ಮೃತ ದುರ್ದೈವಿಗಳು.
ಮೃತರಲ್ಲಿ ಸತ್ಯಾನಂದರಾಜೇ ಅರಸ್ ಹಾಗೂ ಚಂದ್ರರಾಜೇ ಅರಸ್ ಇಬ್ಬರು ಚಿಕ್ಕಪ್ಪ, ದೊಡ್ಡಪ್ಪನ ಮಕ್ಕಳು. ಸತ್ಯಾನಂದರಾಜೇ ಅರಸೇ ಎಲೆಕ್ಟ್ರಿಕ್ ಕಂಟ್ರ್ಯಾಕ್ಟರ್ ಆಗಿದ್ದರು. ಚಂದ್ರರಾಜೇ ಅರಸ್ ಪತ್ನಿ ಸುವೇದಿನಿ ರಾಣಿಯ ಸಹೋದರ. ಚಂದ್ರರಾಜೇ ಅರಸ್ ಅವರು ಕಾರು ಚಾಲನೆ ಮಾಡುತ್ತಿದ್ದರು.
ನಿವೃತ್ತ ಜೆಇ ಸತ್ಯಾನಂದರಾಜೇ ಅರಸ್ ಅವರ ಸೋದರ ಮಾವ ಸಾವನ್ನಪ್ಪಿದ್ದರು. ಕುಟುಂಬ ಸಮೇತ ಮಾವನ ಅಂತಿಮ ದರ್ಶನ ಪಡೆಯಲು ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಸತ್ಯಾನಂದರಾಜೇ ಅರಸ್ ಕುಟುಂಬ ಕಾರಿನಲ್ಲಿ ಪಿರಿಯಾಪಟ್ಟಣ ತಾಲೂಕಿನ ಸಿಗೂರು ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು.
ಇದನ್ನೂ ಓದಿ: ಬೆಂಗಳೂರಲ್ಲಿ ಮನೆಗೆ ನುಗ್ಗಿದ ಚಿರತೆ.. ಡೋರ್ ಲಾಕ್ ಮಾಡಿ ಹೊರ ಬಂದ ದಂಪತಿ; ಆಮೇಲೆ ಏನಾಯ್ತು?
ಬೆಂ-ಮೈಸೂರು ಎಕ್ಸ್‌ಪ್ರೆಸ್ ವೇಯ ತೂಬಿನಕೆರೆ ಎಕ್ಸಿಟ್ ಪಾಯಿಂಟ್‌ನಲ್ಲಿ ಎಕ್ಸಿಟ್ ಆಗಲು ಕಾರು ಸ್ಲೋ ಮಾಡಿದ್ದಾರೆ. ಈ ವೇಳೆ ಐರಾವತ ಬಸ್ ಹಿಂಬದಿಯಿಂದ ಬಂದು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ