ಹಲವಾರು ಆಯಾಮದಲ್ಲಿ ನಡೆಯುತ್ತಿರುವ ತನಿಖೆ
ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್
ಪೊಲೀಸರ ವಶದಲ್ಲಿರುವ ವ್ಯಕ್ತಿಗೆ 39- 40 ವರ್ಷ ವಯಸ್ಸು
ಉಡುಪಿ: ನಾಲ್ವರ ಹತ್ಯೆ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದಾರೆ. ನಾವು ಯಾರನ್ನು ಸಸ್ಪೆಕ್ಟ್ ಮಾಡಿದ್ದು ಅವರನ್ನು ಅರೆಸ್ಟ್ ಮಾಡಿದ್ದೇವೆ. ಅವರೇ ಮಾಡಿದ್ದರೆ ಯಾವ ಕಾರಣಕ್ಕಾಗಿ ಮಾಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ನಂತರ ಮಾತು ಮುಂದುವರಿಸಿದ ಜಿ.ಪರಮೇಶ್ವರ್, ಯಾವ ಉದ್ದೇಶಕ್ಕೆ ಕೊಲೆ ಮಾಡಲಾಗಿದೆ ಅಂತಾ ತನಿಖೆ ನಡೆಸಲಾಗ್ತಿದೆ. ಈ ಕ್ಷಣಕ್ಕೆ ಪ್ರತಿಕ್ರಿಯೆ ನೀಡುವುದು ಆತುರ ಆಗುತ್ತದೆ ಎಂದು ಹೇಳಿದ್ದಾರೆ.
ಸಂಜೆಯೊಳಗೆ ಪೂರ್ಣ ಚಿತ್ರಣ ಸಿಗಲಿದೆ
ಉಡುಪಿ ಎಸ್ ಪಿ ಡಾ. ಅರುಣ್ ಪ್ರಕರಣ ಸಂಬಂಧಿಸಿದಂತೆ ಮಾತನಾಡಿದ್ದು, ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಕೊಲೆ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದೇವೆ. ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡ ಬಂದಿದ್ದೇವೆ. ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.
ನಂತರ ಮಾತು ಮುಂದುವರಿಸಿದ ಎಸ್ ಪಿ ಡಾ. ಅರುಣ್, ಸದ್ಯ ಚೌಗಲೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ. ಸಿಆರ್ಪಿಎಫ್ ಅಲ್ಲ, ಸಿವಿಲ್ ಪೊಲೀಸ್ನಲ್ಲಿ ಇದ್ದಾನೆ ಎಂಬ ಮಾಹಿತಿ ಇದೆ. ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಬಲವಾದ ಶಂಕೆಯ ಮೇರೆಗೆ ಪ್ರವೀಣ್ ಅರುಣ್ ಚೌಗಲೆಯನ್ನ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಕೃತ್ಯದಲ್ಲಿ ಪಾತ್ರವಿದ್ದರೆ ಬಂಧಿಸುತ್ತೇವೆ. ಪ್ರಕರಣ ಸಂಬಂಧ 15 ರಿಂದ 20 ಜನರ ವಿಚಾರಣೆ ನಡೆಯುತ್ತಿದೆ. ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆದಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ರಚಿಸಲಾಗಿದೆ ಎಂದಿದ್ದಾರೆ.
ಯಾವುದೇ ವದಂತಿಗಳಿಗೆ ಯಾರು ಕಿವಿಕೊಡಬಾರದು. ತನಿಖೆ ನಂತರ ಪ್ರಕರಣದ ಬಗ್ಗೆ ಪೂರ್ಣ ಚಿತ್ರಣವನ್ನು ಕೊಡುತ್ತೇವೆ. ವಶದಲ್ಲಿರುವ ಶಂಕಿತ ವ್ಯಕ್ತಿಗೆ 39- 40 ವರ್ಷ ವಯಸ್ಸು ಅಂದಾಜಿಸಲಾಗಿದೆ. ಮಲ್ಪೆಯ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ ಗೌಡ ಪ್ರಕರಣದ ತನಿಖಾಧಿಕಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ