newsfirstkannada.com

ಕರೆಂಟ್ ಕದ್ದ ಆರೋಪ.. ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್; ಅಸಲಿಗೆ ಆಗಿದ್ದೇನು?

Share :

14-11-2023

  ಜೆ.ಪಿ ನಗರದ ಹೆಚ್‌ಡಿಕೆ ನಿವಾಸಕ್ಕೆ ಅಕ್ರಮ ವಿದ್ಯುತ್‌ನಿಂದ ದೀಪಾಲಂಕಾರ

  ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಹಾಕಬಹುದಿತ್ತಲ್ಲ?

  ಕರೆಂಟ್ ಕದ್ದ ಆರೋಪಕ್ಕೆ ಹೆಚ್‌.ಡಿ ಕುಮಾರಸ್ವಾಮಿ ಕೂಡ ತಿರುಗೇಟು

ಬೆಂಗಳೂರು: ದೀಪಾವಳಿ ಪ್ರಯುಕ್ತ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರ ಜೆ.ಪಿ ನಗರದ ನಿವಾಸಕ್ಕೆ ವಿದ್ಯುತ್‌ ದೀಪಾಲಂಕಾರ ಮಾಡಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಟ್ವೀಟ್ ಮಾಡಿರೋ ಕಾಂಗ್ರೆಸ್, ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ ಎಂದು ಕಿಡಿಕಾರಿದೆ. ಇದಕ್ಕೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಕೂಡ ಕೌಂಟರ್ ಕೊಟ್ಟಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ ವಿಡಿಯೋ ಶೇರ್ ಮಾಡಿರೋ ಕರ್ನಾಟಕ ಕಾಂಗ್ರೆಸ್‌, ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ ಎಂದಿದೆ.

ಕಾಂಗ್ರೆಸ್‌ ಮಾಡಿರೋ ಕರೆಂಟ್ ಕದ್ದ ಆರೋಪಕ್ಕೆ ಹೆಚ್‌.ಡಿ ಕುಮಾರಸ್ವಾಮಿ ಕೂಡ ತಿರುಗೇಟು ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಪ್ರತಿಕ್ರಿಯೇ ನೀಡಿರುವ ಹೆಚ್‌ಡಿಕೆ, ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ ಎಂದಿದ್ದಾರೆ. ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ.

ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಸವಾಲು ಹಾಕಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕರೆಂಟ್ ಕದ್ದ ಆರೋಪ.. ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್; ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2023/11/HD-kumaraswmy-house-Power.jpg

Load More