BREAKING: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

author-image
Ganesh
Updated On
BREAKING: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ
Advertisment
  • ಪಾಶ್ವವಾಯುಗೆ ಒಳಗಾಗಿದ್ದ ಆಚಾರ್ಯ ಸತ್ಯೇಂದ್ರ ದಾಸ್
  • ಅರ್ಚಕರು ಲಕ್ನೋದ ಎಸ್‌ಜಿಪಿಜಿಐನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು
  • ಪ್ರಧಾನ ಅರ್ಚಕರ ನಿಧನಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಕಂಬನಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದ (Shri Ram Janmabhoomi Temple) ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ಫೆಬ್ರವರಿ 3 ರಂದು ಅವರನ್ನು ಲಕ್ನೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. 87 ವರ್ಷದ ಸತ್ಯೇಂದ್ರ ದಾಸ್, ಕಳೆದ 34 ವರ್ಷಗಳಿಂದ ರಾಮಲಾಲ್ಲಾಗೆ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದರು. ತಾತ್ಕಾಲಿಕ ಡೇರೆಯಿಂದ ಭವ್ಯ ದೇವಾಲಯದಲ್ಲಿ ಸಿಂಹಾಸನಾರೋಹಣ ಮಾಡುವವರೆಗೂ ಶ್ರೀರಾಮನ ಸೇವಕರಾಗಿ ಪೂಜೆ ಮುಂದುವರಿಸಿದ್ದರು. ಕೆಲವು ದಿನಗಳ ಹಿಂದೆ ಪಾರ್ಶ್ವವಾಯುವಿಗೆ ಒಳಗಾಗಿದ್ದರು. ಕಾರಣ ಅವರ ಆರೋಗ್ಯ ತೀರಾ ಹದಗೆಟ್ಟು ಲಕ್ನೋದ ಎಸ್‌ಜಿಪಿಜಿಐನ ನರವಿಜ್ಞಾನ ವಿಭಾಗಕ್ಕೆ ದಾಖಲಿಸಲಾಗಿತ್ತು. ಜೊತೆಗೆ ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದಲೂ ಬಳಲುತ್ತಿದ್ದರು.

ಸತ್ಯೇಂದ್ರ ದಾಸ್ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದುಃಖ ವ್ಯಕ್ತಪಡಿಸಿದ್ದಾರೆ. ಶ್ರೀ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ, ಶ್ರೀ ಅಯೋಧ್ಯಾ ಧಾಮ್‌ನ ಶ್ರೀ ರಾಮನ ಪರಮ ಭಕ್ತ ಆಚಾರ್ಯ ಶ್ರೀ ಸತ್ಯೇಂದ್ರ ಕುಮಾರ್ ದಾಸ್ ಜಿ ಮಹಾರಾಜ್ ನಿಧನ ಅತ್ಯಂತ ದುಃಖಕರ ಮತ್ತು ಆಧ್ಯಾತ್ಮಿಕ ಜಗತ್ತಿಗೆ ತುಂಬಲಾಗದ ನಷ್ಟವಾಗಿದೆ. ವಿನಮ್ರ ಶ್ರದ್ಧಾಂಜಲಿ! ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತಾಯಿ ನಾಡಿನ ರಕ್ಷಣೆಯಲ್ಲಿ ಈ ರಾಜ್ಯದ ಕೊಡುಗೆ ಅಪಾರ.. ಹೆಚ್ಚು ಯೋಧರ ಕಳುಹಿಸಿಕೊಟ್ಟ ಪ್ರಮುಖ 10 ರಾಜ್ಯಗಳು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment