ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ‌ ಕುಲಪತಿ ಪ್ರೊ.ಮುಝಾಫರ್ ಅಸ್ಸಾದಿ ಇನ್ನಿಲ್ಲ.. ಸಿಎಂ ಸಂತಾಪ

author-image
Bheemappa
Updated On
ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ‌ ಕುಲಪತಿ ಪ್ರೊ.ಮುಝಾಫರ್ ಅಸ್ಸಾದಿ ಇನ್ನಿಲ್ಲ.. ಸಿಎಂ ಸಂತಾಪ
Advertisment
  • ರಾಜ್ಯಶಾಸ್ತ್ರದ ಉಪನ್ಯಾಸಕರಾಗಿದ್ದ ಪ್ರೊ. ಮುಝಾಫರ್ ಅಸ್ಸಾದಿ
  • ಹಿರಿಯ ವಿದ್ವಾಂಸ ಪ್ರೊ.ಮುಝಾಫರ್ ಅಸ್ಸಾದಿಗೆ ಸಿಎಂ ಸಂತಾಪ
  • ಮೈಸೂರಿನ ಕುವೆಂಪುನಗರದಲ್ಲಿ ವಾಸವಿದ್ದ ಮುಝಾಫರ್ ಅಸ್ಸಾದಿ

ಮೈಸೂರು: ಹಿರಿಯ ವಿದ್ವಾಂಸ, ವಿಶ್ಲೇಷಕ ಹಾಗೂ ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ (63) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ‌ ಕುಲಪತಿ ಪ್ರೊ.ಮುಝಾಫರ್ ಅಸ್ಸಾದಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರು ಮೂಲತಹ ಉಡುಪಿ ಜಿಲ್ಲೆಯ ಶಿರ್ವ ಗ್ರಾಮದ ನಿವಾಸಿಯಾಗಿದ್ದರು. ಬಾಲಕನಾಗಿದ್ದಾಗಲೇ ಓದುವುದರಲ್ಲಿ ಹವ್ಯಾಸಿ ಮೂಡಿಸಿಕೊಂಡು ಉನ್ನತ ಸ್ಥಾನವನ್ನು ತಲುಪಿದ್ದರು. ರಾಜ್ಯಶಾಸ್ತ್ರದ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ಇವರು ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ‌ ಕುಲಪತಿಗಳಾಗಿದ್ದರು. ಮೈಸೂರಿನಲ್ಲೇ ಹೆಚ್ಚು ಕಾಲ ಉಳಿದಿದ್ದರಿಂದ ಕುವೆಂಪುನಗರದಲ್ಲಿ ವಾಸವಿದ್ದರು.

ಇದನ್ನೂ ಓದಿ:ಮೊಟ್ಟೆ ಇಡದೇ ಜನ್ಮ ನೀಡುವ ಪ್ರಾಣಿ ಟೀಚರ್- ಮಕ್ಕಳ ಉತ್ತರಕ್ಕೆ ಬೇಸರಗೊಳ್ಳದೇ ಫುಲ್ ಮಾರ್ಕ್ಸ್​ ಕೊಟ್ಟ ಶಿಕ್ಷಕಿ

publive-image

ಮೈಸೂರು ವಿವಿಯ ಪ್ರಾಧ್ಯಾಪಕರಾಗಿದ್ದ ಅಸ್ಸಾದಿ ಅವರು ಬುಡಕಟ್ಟು ಜನರ ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ಮಾಡಿದ್ದರು. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಕಗೊಂಡಿದ್ದ ಸಮಿತಿಯ ಅಧ್ಯಕ್ಷರಾಗಿದ್ದರು. ಸಾಮಾಜಿಕ ಚಳವಳಿಗಳು, ಗಾಂಧಿವಾದ, ರಾಜಕೀಯ, ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಪ್ರಜಾಪ್ರಭುತ್ವ ಸಿದ್ಧಾಂತ, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು ವಿಚಾರಗಳ ಕುರಿತು ಆಳವಾದ ಅಧ್ಯಯನ ಮಾಡಿದ್ದರು.

ಸದ್ಯ ಈ ಸಬಂಧ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಅನ್ನು ಶೇರ್ ಮಾಡಿದ್ದಾರೆ. ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ ಎಂದು ಹೇಳಿದ್ದಾರೆ.


">January 4, 2025

ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್‌ ಪೂರ್ಣ ಬರವಣಿಗೆ, ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದ ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ. ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಅವರನ್ನು ಕಳೆದುಕೊಂಡಿರುವುದು ವೈಯಕ್ತಿಕವಾಗಿ ದೊಡ್ಡ ನಷ್ಟ. ಪ್ರೊ.ಅಸ್ಸಾದಿ ಅವರನ್ನು ಕಳೆದುಕೊಂಡ ಅವರ ಕುಟುಂಬ, ಸ್ನೇಹಿತರಿಗೆ, ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment