ಲಕ್ಷ್ಮೀ ಬಾರಮ್ಮ ಸೀರಿಯಲ್​ ಕವಿತಾ ಗೌಡಗೆ ಅದ್ದೂರಿ ಸೀಮಂತ ಶಾಸ್ತ್ರ; ಯಾರೆಲ್ಲಾ ಬಂದಿದ್ರು?

author-image
Veena Gangani
Updated On
ಲಕ್ಷ್ಮೀ ಬಾರಮ್ಮ ಸೀರಿಯಲ್​ ಕವಿತಾ ಗೌಡಗೆ ಅದ್ದೂರಿ ಸೀಮಂತ ಶಾಸ್ತ್ರ; ಯಾರೆಲ್ಲಾ ಬಂದಿದ್ರು?
Advertisment
  • ಲಕ್ಷ್ಮೀ ಬಾರಮ್ಮ ಸೀರಿಯಲ್​ನಿಂದ ಖ್ಯಾತಿ ಪಡೆದ ಸ್ಟಾರ್​ ದಂಪತಿ
  • 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಚಂದನ್, ಕವಿತಾ ಗೌಡ
  • ತನಿಷಾ ಕುಪ್ಪಂಡ, ನೇಹಾ ಗೌಡ, ನಮ್ರತಾ ಗೌಡ ಸೇರಿ ಯಾರೆಲ್ಲಾ ಭಾಗಿ?

ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಮನೆಯಲ್ಲಿ ಸಂಭ್ರಮದ ಮನೆ ಮಾಡಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರೋ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಖುಷಿ ದುಪ್ಪಟ್ಟಾಗಿದೆ. ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ​ ಖ್ಯಾತಿ ಪಡೆದುಕೊಂಡ ಈ ಸ್ಟಾರ್​ ಜೋಡಿ ಚೊಚ್ಚಲ ಮಗುವನ್ನು ಬರಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: ಇದು ಕಣ್ರೋ ಮಜಾ ಅಂದ್ರೆ.. ತಾಂಡವ್​ ಮದ್ವೆ ನಿಲ್ಲಿಸಲು ಟ್ರಾಕ್ಟರ್​ನಲ್ಲಿ ಮಂಟಪಕ್ಕೆ ಎಂಟ್ರಿ ಕೊಟ್ಟ ಕುಸುಮಾ

publive-image

ಇದರ ನಡುವೆ ನಟಿ ಕವಿತಾ ಗೌಡ ಸೀಮಂತ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ. ಮೇ 5ರಂದು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮುದ್ದಾದ ಫೋಟೋವನ್ನು ಶೇರ್​ ಮಾಡಿಕೊಳ್ಳುವ ಮೂಲಕ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಅಂತ ತಿಳಿಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಕಿರುತೆರೆ ನಟ ನಟಿಯರು ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್​ಗೆ ಶುಭ ಹಾರೈಸಿದ್ದರು. ಆಗಾಗ ನಟಿ ಕವಿತಾ ಗೌಡ ತಮ್ಮ ಮುದ್ದಾದ ಬೇಬಿ ಬಂಪ್​ ಫೋಟೋವನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

publive-image

ಇದೀಗ ನಟಿ ಕವಿತಾ ಗೌಡ ಅವರ ಸೀಮಂತ ಶಾಸ್ತ್ರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಈ ಸಂಭ್ರಮದಲ್ಲಿ ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನೇಹಾ ಗೌಡ, ಬಿಗ್​ಬಾಸ್​ ಮಾಜಿ ಸ್ಪರ್ಧಿಗಳಾದ ತನಿಷಾ ಕುಪ್ಪಂಡ, ನಮ್ರತಾ ಗೌಡ, ಅನುಪಮಾ ಗೌಡ, ಸ್ಯಾಂಡಲ್​ವುಡ್​ ನಟಿ ಶೃತಿ ಹಾಗೂ ಅವರ ಪುತ್ರಿ ಗೌರಿ, ನಟ ರಾಜೀವ್ ಹನು ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ವಿಶೇಷ ಎಂದರೆ ಕವಿತಾ ಗೌಡ ಹಾಗೂ ನೇಹಾ ಗೌಡ ಇಬ್ಬರೂ ಒಂದೇ ಸಮಯದಲ್ಲಿ ಗರ್ಭಿಣಿಯಾಗಿದ್ದು, ಇದೀಗ ಕವಿತಾ ಗೌಡ ಅವರ ಸೀಮಂತ ಶಾಸ್ತ್ರದಲ್ಲಿ ನೇಹಾ ಗೌಡ ಕೂಡ ಭಾಗಿಯಾಗಿದ್ದರು.

ಇದನ್ನೂ ಓದಿ:​ದರ್ಶನ್​​ಗೆ ಶುರುವಾಗಿದೆ ಮತ್ತೊಂದು ಚಿಂತೆ.. ಬೇಡಿಕೆಯಿಟ್ಟ ದಾಸ​.. ನೋ ಎಂದ ಜೈಲು ಅಧಿಕಾರಿಗಳು; ಏನದು?

ಕವಿತಾ ಗೌಡ ಅವರು ಕನ್ನಡ ಕಿರುತೆರೆ ನಟಿ. ಚಂದನ್​ ಕುಮಾರ್​ ಅವರು ಕಿರುತೆರೆ, ಬೆಳ್ಳಿತೆರೆಯಲ್ಲಿ ಮುಂಚಿದ ನಟ. ಕವಿತಾ ಗೌಡ ಹಾಗೂ ಚಂದನ್ ಅವರು ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ನಟಿಸಿದ್ದರು. ತದನಂತರ ಲಾಕ್‌ಡೌನ್ ಸಮಯದಲ್ಲಿ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಬಳಿಕ 2021 ಮೇ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಸ್ಟಾರ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment