ದರ್ಶನ್-ವಿಜಯಲಕ್ಷ್ಮೀ ವಿವಾಹ ವಾರ್ಷಿಕೋತ್ಸವ ಸಂಭ್ರಮ.. ಹೊಸ ಲುಕ್​ನಲ್ಲಿ ಚಾಲೆಂಜಿಂಗ್ ಸ್ಟಾರ್!

author-image
Veena Gangani
Updated On
ದರ್ಶನ್-ವಿಜಯಲಕ್ಷ್ಮೀ ವಿವಾಹ ವಾರ್ಷಿಕೋತ್ಸವ ಸಂಭ್ರಮ.. ಹೊಸ ಲುಕ್​ನಲ್ಲಿ ಚಾಲೆಂಜಿಂಗ್ ಸ್ಟಾರ್!
Advertisment
  • ನಟ ದರ್ಶನ್​ ದಂಪತಿಗೆ ಇದು ಎಷ್ಟನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ?
  • ಹ್ಯಾಪಿ ವೆಡ್ಡಿಂಗ್ ಆನಿವರ್ಸರಿ ಅಣ್ಣ ಅತ್ತಿಗೆ ಎಂದು ಫ್ಯಾನ್ಸ್ ಶುಭ ಹಾರೈಕೆ​
  • ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ದರ್ಶನ್​, ವಿಜಯಲಕ್ಷ್ಮೀ ಫೋಟೋ

ಸ್ಯಾಂಡಲ್​ವುಡ್​ ನಟ ದರ್ಶನ್​ ಹಾಗೂ ವಿಜಯಲಕ್ಷ್ಮೀ ದಂಪತಿಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಹೀಗಾಗಿ ಕುಟುಂಬಸ್ಥರು, ಬಂಧು ಮಿತ್ರರು, ಮುಖ್ಯವಾಗಿ ಅಭಿಮಾನಿಗಳು ನಟ ದರ್ಶನ್​ ಹಾಗೂ ವಿಜಯಲಕ್ಷ್ಮೀ ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ‘ನನ್ನ ಮಗಳು..’ ಬೇಹುಗಾರಿಕೆ ಆರೋಪ ಹೊತ್ತ ಜ್ಯೋತಿ ಮಲ್ಹೋತ್ರ ಬಗ್ಗೆ ತಂದೆ ಏನಂದ್ರು..?

publive-image

ನಟ ದರ್ಶನ್​ ಹಾಗೂ ವಿಜಯಲಕ್ಷ್ಮೀ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 22 ವರ್ಷ ತುಂಬಿದೆ. ಈ ಸಂಬಂಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಪತಿಯ ಜೊತೆಗೆ ನಿಂತುಕೊಂಡಿರೋ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ (eternally) ಶಾಶ್ವತ ಅಂತ ಬರೆದುಕೊಂಡಿದ್ದಾರೆ. ಇದೇ ಫೋಟೋ ಈಗ ವೈರಲ್​ ಆಗುತ್ತಿದೆ.

publive-image

ಸದ್ಯ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ಅವರು ರೆಸಾರ್ಟ್​ವೊಂದರಲ್ಲಿ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಆ ಫೋಟೋಗಳನ್ನು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

publive-image

ಸದ್ಯ ನಟ 'ಡೆವಿಲ್' ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಆಪ್ತರೊಬ್ಬರ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ನವ ವಧು-ವರರನ್ನು ಆಶೀರ್ವದಿಸಿದ್ದರು.  ಕಳೆದ ವರ್ಷ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ದಂಪತಿ ದುಬೈನಲ್ಲಿ ಬಹಳ ಅದ್ಧುರಿಯಾಗಿ ತಮ್ಮ 21ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.

publive-image

2003 ಮೇ 19ರಂದು ನಟ ದರ್ಶನ್​ ಹಾಗೂ ವಿಜಯಲಕ್ಷ್ಮಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಟ ದರ್ಶನ್​ ಹಾಗೂವಿಜಯಲಕ್ಷ್ಮಿ ಅವರು ಧರ್ಮಸ್ಥಳದ ವಸಂತ್​ ಮಹಲ್‌ನಲ್ಲಿ ಮದುವೆಯಾಗಿದ್ದರು. ದರ್ಶನ್​ ಹಾಗೂವಿಜಯಲಕ್ಷ್ಮಿ ಇಬ್ಬರ ಮದುವೆ ಆಮಂತ್ರಣ ಪತ್ರ ಕೂಡ ವೈರಲ್​ ಆಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment