/newsfirstlive-kannada/media/post_attachments/wp-content/uploads/2024/10/Darshan-bellary-Jail-12.jpg)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ A-2 ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಆ ಮೂಲಕ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಬಿಗ್ ಶಾಕ್ ಆಗಿದೆ.
ಏನಿದು ಪ್ರಕರಣ..?
ರೇಣುಕಾಸ್ವಾಮಿ ವಿರುದ್ಧ ನಟಿ ಪವಿತ್ರಗೌಡಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪ ಇತ್ತು. ಇದೇ ಕಾರಣಕ್ಕೆ ಕಳೆದ ಜೂನ್ನಲ್ಲಿ ರೇಣುಕಾಸ್ವಾಮಿಯನ್ನು ದರ್ಶನ್ ಅಂಡ್ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ಕರೆದುಕೊಂಡು ಬಂದಿತ್ತು. ಈ ವೇಳೆ ದರ್ಶನ್ ಅಂಡ್ ಗ್ಯಾಂಗ್ ನಡೆಸಿದ್ದ ಮಾರಣಾಂತಿಕ ಹಲ್ಲೆಗೆ ರೇಣುಕಾಸ್ವಾಮಿ ಜೀವ ಕಳೆದುಕೊಂಡಿದ್ದರು ಎಂಬ ಆರೋಪ ಇತ್ತು. ಇದರ ತನಿಖೆ ನಡೆಸಿದ್ದ ಬೆಂಗಳೂರು ಪೊಲೀಸರು ಒಟ್ಟು 17 ಆರೋಪಿಗಳನ್ನು ಬಂಧಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ್ದ ಪೊಲೀಸರು, 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಈ ಬೆನ್ನಲ್ಲೇ ದರ್ಶನ್ ಪರ ವಕೀಲರು ಬೆಂಗಳೂರಿನ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:ದರ್ಶನ್ ಸಿಗ್ನಲ್ ಬಳಿಕ DBoss ಸೆಲೆಬ್ರಿಟಿಸ್‌ಗೆ ವಿಜಯಲಕ್ಷ್ಮಿ ಮೆಸೇಜ್.. ಫ್ಯಾನ್ಸ್‌ಗೆ ಗುಡ್‌ನ್ಯೂಸ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ