/newsfirstlive-kannada/media/post_attachments/wp-content/uploads/2025/05/darshan14.jpg)
ಸ್ಯಾಂಡಲ್ವುಡ್ ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರು ಸಖತ್ ಖುಷಿಯಲ್ಲಿದ್ದಾರೆ. ತಮ್ಮ 22ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮವನ್ನು ದುಪ್ಪಟ್ಟು ಮಾಡಿದ್ದಾರೆ.
ಇದನ್ನೂ ಓದಿ:ದರ್ಶನ್-ವಿಜಯಲಕ್ಷ್ಮೀ ವಿವಾಹ ವಾರ್ಷಿಕೋತ್ಸವ ಸಂಭ್ರಮ.. ಹೊಸ ಲುಕ್ನಲ್ಲಿ ಚಾಲೆಂಜಿಂಗ್ ಸ್ಟಾರ್!
2003 ಮೇ 19ರಂದು ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರು ಧರ್ಮಸ್ಥಳದ ವಸಂತ್ ಮಹಲ್‌ನಲ್ಲಿ ಮದುವೆಯಾಗಿದ್ದರು.
ಈಗ ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು 22 ವರ್ಷಕ್ಕೆ ಕಾಲಿಟ್ಟಿದೆ. ಹೀಗಾಗಿ ದರ್ಶನ್ ಹಾಗೂ ವಿಜಯಲಕ್ಷ್ಮೀ ದಂಪತಿ ಬಾಲಿಯಲ್ಲಿ 22ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಕೇಕ್ ಕತ್ತರಿಸುವ ಮೂಲಕ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ.
ಇದನ್ನೂ ಓದಿ: ‘ನನ್ನ ಮಗಳು..’ ಬೇಹುಗಾರಿಕೆ ಆರೋಪ ಹೊತ್ತ ಜ್ಯೋತಿ ಮಲ್ಹೋತ್ರ ಬಗ್ಗೆ ತಂದೆ ಏನಂದ್ರು..?
ಈ ವಿಶೇಷವಾದ ಸಂದರ್ಭದಲ್ಲಿ ಪತ್ನಿಗಾಗಿ ನಟ ದರ್ಶನ್ ಹಿಂದಿ ಹಾಡು ಹಾಡಿದ್ದಾರೆ. ಅಷ್ಟೇ ಅಲ್ಲದೇ ಪತ್ನಿ ವಿಜಯಲಕ್ಷ್ಮೀ ಜೊತೆ ನಟ ದರ್ಶನ್ ಅವರ ಫೇವರಿಟ್ ಮುದ್ದು ರಾಕ್ಷಸಿ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ನಟ ಚಿಕ್ಕಣ್ಣ ಸೇರಿದಂತೆ ಆಪ್ತ ಬಳಗದ ಜೊತೆ ವೆಡ್ಡಿಂಗ್ ಆನಿವರ್ಸರಿ ಆಚರಿಸಿಕೊಂಡಿದ್ದಾರೆ.
ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಳಿಕ ಬರ್ತ್ ಡೇಗೆ ಬ್ರೇಕ್ ಹಾಕಿದ್ದರು. ಬಳಿಕ ನಿರಂತರವಾಗಿ ಡೆವಿಲ್ ಶೂಟಿಂಗ್ನಲ್ಲಿ ದರ್ಶನ್ ಭಾಗಿಯಾಗಿದ್ದರು. ಕಳೆದ ವರ್ಷ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ದಂಪತಿ ದುಬೈನಲ್ಲಿ ಬಹಳ ಅದ್ಧುರಿಯಾಗಿ ತಮ್ಮ 21ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಇದೀಗ ಆಪ್ತರು ಹಾಗೂ ಪತ್ನಿ ಜೊತೆ ಬಾಲಿಯಲ್ಲಿ ಪಾರ್ಟಿ ಮೂಡ್ನಲ್ಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ