newsfirstkannada.com

ನಟ ದರ್ಶನ್ ತಾಯಿ ಮೀನಾ, ಸಹೋದರ ದಿನಕರ ಜೈಲಿಗೆ ಭೇಟಿ.. ಮಗನ ಸಂಕಟ ನೋಡಿ ಅಮ್ಮ ಭಾವುಕ..

Share :

Published July 1, 2024 at 1:01pm

Update July 1, 2024 at 1:02pm

  ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿರುವ ದರ್ಶನ್

  ಹತ್ಯೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್, ಎ1 ಪವಿತ್ರಾಗೌಡ

  ವಿಚಾರಣಾಧೀನ ಕೈದಿಯಾಗಿ ಪರಪ್ಪನ ಜೈಲಿನಲ್ಲಿರುವ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರದ ಜೈಲು ಪಾಲಾಗಿದ್ದಾರೆ. ಇತ್ತೀಚೆಗಷ್ಟೇ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್​ ಅವರು ಜೈಲಿಗೆ ಭೇಟಿ ನೀಡಿ ದರ್ಶನ್ ಅವರನ್ನು ನೋಡಿಕೊಂಡು ಹೋಗಿದ್ದರು. ಇದರ ಬೆನ್ನಲ್ಲೇ ದರ್ಶನ್ ಅವರ ತಾಯಿ ಮೀನಾ ಹಾಗೂ ಸಹೋದರ ದಿನಕರ ತೂಗುದೀಪ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಪಾಂಡ್ಯ ಮ್ಯಾಚ್ ವಿನ್ನಿಂಗ್ ಆಟಕ್ಕೆ ಸೆಲ್ಯೂಟ್.. ಗೆಲುವಿನ ಹಿಂದೆ ಹಾರ್ದಿಕ್ ನುಂಗಿರುವ ನೋವುಗಳು ಎಷ್ಟು ಗೊತ್ತಾ..?

ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಜೈಲು ಸೇರಿದ ಮೇಲೆ ನಿರ್ದೇಶಕ ಪ್ರೇಮ್, ಇವರ ಪತ್ನಿ ರಕ್ಷಿತಾ ಪ್ರೇಮ್ ಅವರು ಜೈಲಿಗೆ ಭೇಟಿ ನೀಡಿದ್ದರು. ದರ್ಶನ್ ಪುತ್ರ, ಪತ್ನಿ ಕೂಡ ಹೋಗಿ ಮಾತಾಡಿಸಿಕೊಂಡು ಬಂದಿದ್ದರು. ಚಿತ್ರರಂಗದ ಕೆಲವರು ದರ್ಶನ್​ರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ಆದರೆ ಇದುವರೆಗೂ ದರ್ಶನ್ ಅವರನ್ನು ನೋಡಲು ತಾಯಿ, ಸಹೋದರ ಬಂದಿರಲಿಲ್ಲ ಎಂದು ಹೇಳಲಾಗುತ್ತಿತ್ತು.  ಇದೀಗ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಮತ್ತು ಸಹೋದರ ದಿನಕರ ತೂಗುದೀಪ ಅವರು ಜೈಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ ದರ್ಶನ್ ಅವರನ್ನು ನೋಡಿ ತಾಯಿ ಭಾವುಕರಾಗಿದ್ದಾರೆ.

ಇದನ್ನೂ ಓದಿ: RCB ಫ್ಯಾನ್ಸ್​ಗೆ ಗುಡ್​ನ್ಯೂಸ್​.. ಬೆಂಗಳೂರು ಫ್ರಾಂಚೈಸಿಯಿಂದ ಕಾರ್ತಿಕ್​​ಗೆ ಮಹತ್ವದ ಜವಾಬ್ದಾರಿ, ಏನದು?

ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ದರ್ಶನ್ ಅವರು ಜೈಲು ಸೇರಿದ ಮೇಲೆ ತೀರಾ ನೊಂದಿದ್ದ ತಾಯಿ ಹಾಗೂ ಸಹೋದರ ಬೇಸರಗೊಂಡಿದ್ದರು. ಮೈಸೂರಿನ ನಿವಾಸದಲ್ಲಿದ್ದ ಇವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಡಲು ನಿರಾಕರಿಸಿದ್ದರು. ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್, ಪವಿತ್ರಾಗೌಡ ಸೇರಿ ಒಟ್ಟು 17 ಆರೋಪಿಗಳು ಜೈಲಿಗೆ ಹೋಗಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ನಟ ದರ್ಶನ್ ತಾಯಿ ಮೀನಾ, ಸಹೋದರ ದಿನಕರ ಜೈಲಿಗೆ ಭೇಟಿ.. ಮಗನ ಸಂಕಟ ನೋಡಿ ಅಮ್ಮ ಭಾವುಕ..

https://newsfirstlive.com/wp-content/uploads/2024/07/DARSHAN_FAMILY.jpg

Load More