/newsfirstlive-kannada/media/post_attachments/wp-content/uploads/2025/07/DARSHAN.jpg)
ಮೈಸೂರು: ಆಷಾಢ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ದಂಪತಿ ಸಮೇತ ಚಾಮುಂಡಿ ತಾಯಿಯ ದರ್ಶನ ಪಡೆದು ವಾಪಸ್ ಆಗಿದ್ದಾರೆ. ಪ್ರತಿ ವರ್ಷವೂ ಆಷಾಢದಲ್ಲಿ ದರ್ಶನ್ ಚಾಮುಂಡಿಯ ಆಶೀರ್ವಾದ ಪಡೆಯುತ್ತಾರೆ. ಕಳೆದ ಬಾರಿ ಜೈಲಿನಲ್ಲಿದ್ದ ಕಾರಣ ದೇವಿಯ ದರ್ಶನ ಮಾಡಿರಲಿಲ್ಲ.
ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ
ನಟ ದರ್ಶನ್ ಮಾತ್ರವಲ್ಲ, ನಾಡ ಅದಿದೇವತೆಯ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ದೇಗುಲದಲ್ಲಿ ಬೆಳಗಿನ ಜಾವದಿಂದಲೇ ವಿಶೇಷ ಪೂಜಾ ಕೈಂಕಾರ್ಯ ಶುರುವಾಗಿವೆ. ಮುಂಜಾನೆ 3:30ಕ್ಕೆ ವಿವಿಧ ಅಭಿಷೇಕಗಳು ನಡೆದಿವೆ. ಬೆಳಗ್ಗೆ 6ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಜೋರು ಮಳೆ.. ಎರಡು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ವಿವಿಧ ಬಗೆಯ ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ. ನೂಕು-ನುಗ್ಗುಲು ಉಂಟಾಗದ ರೀತಿಯಲ್ಲಿ ಬ್ಯಾರಿಕೆಡ್ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್ ಖರೀದಿ ಮಾಡಿ ಬರುವವರಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಧರ್ಮ ದರ್ಶನ ಹಾಗೂ ಮೆಟ್ಟಿಲುಗಳ ಮೂಲಕವೂ ಭಕ್ತರು ಹರಿದು ಬರುತ್ತಿದ್ದಾರೆ. ಇನ್ನು ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧ ಮಾಡಲಾಗಿದೆ. ಲಲಿತಮಹಲ್ ಮೈದಾನದಿಂದ ಉಚಿತ ಸಾರಿಗೆ ಬಸ್ ವ್ಯವಸ್ಥೆ ಇದೆ. ಕುಡಿಯುವ ನೀರು, ಶೌಚಾಲಯ, ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.
ಇದ್ನೂ ಓದಿ: ಗಿಲ್ ದ್ವಿಶತಕ ಬೆನ್ನಲ್ಲೇ ಇಂಗ್ಲೆಂಡ್ ಮೇಲೆ ಆಕಾಶ್ ದೀಪ್ ಸ್ಟ್ರೈಕ್.. ಫುಲ್ ಶಾಕ್ ಟ್ರೀಟ್ಮೆಂಟ್..!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ