newsfirstkannada.com

‘ಅಷ್ಟೊಂದು ಸಾಕ್ಷಿನಾ?’ ಜೈಲಲ್ಲಿ ದಂಗಾದ ದರ್ಶನ್.. ಚಾರ್ಜ್​ಶೀಟ್ ಪುಟಗಳ ಸಂಖ್ಯೆ ತಿಳಿದು ಹೇಳಿದ್ದೇನು?

Share :

Published September 4, 2024 at 2:13pm

    ರೇಣುಕಾ ಕೇಸ್‌ನಲ್ಲಿ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

    ಎಷ್ಟು ಸಾಕ್ಷಿಗಳು, ಏನು ಅಂಶ ಇದೆ ಅನ್ನೋ ಬಗ್ಗೆ ದಾಸ​ ಚರ್ಚೆ

    A2 ಇರೋದನ್ನ A1 ಮಾಡಿದ್ರಾ ಅನ್ನೋ ಬಗ್ಗೆ ದರ್ಶನ್​​​ ಚರ್ಚೆ

ಬೆಂಗಳೂರು: ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಚಾರ್ಜ್​ಶೀಟ್ ಸಲ್ಲಿಕೆಯ ಪುಟಗಳ ಸಂಖ್ಯೆ ತಿಳಿದು ಗಾಬರಿಯಾಗಿದ್ದಾರೆ. ಅಷ್ಟೊಂದು ಸಾಕ್ಷಿಗಳಾ ಎಂದು ಪ್ರಶ್ನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರೇಣುಕಾಸ್ವಾಮಿ ಕೇಸ್​​ನಲ್ಲಿ ತಮ್ಮ ಪಾತ್ರದ ಬಗ್ಗೆ ಪೊಲೀಸರು ಏನೆಲ್ಲ ಅಂಶಗಳನ್ನು ಉಲ್ಲೇಖಿಸಿದ್ದಾರೆ. A2 ಇರೋದನ್ನ A1 ಮಾಡಿದ್ರಾ ಅನ್ನೋ ಬಗ್ಗೆಯೂ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಅಂದ್ಹಾಗೆ ಪೊಲೀಸರು ಒಟ್ಟು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. 231 ಮಂದಿಯನ್ನು ಸಾಕ್ಷಿದಾರರನ್ನಾಗಿ ಮಾಡಿದ್ದಾರೆ. ಇದೇ ಕಾರಣಕ್ಕೆ ಅಷ್ಟೊಂದು ಸಾಕ್ಷಿಗಳಾ ಎಂದು ಪ್ರಶ್ನೆ ಮಾಡಿದ್ದಾರಂತೆ.

ಇದನ್ನೂ ಓದಿ:ಮೃಗೀಯ ರೀತಿಯಲ್ಲಿ ವರ್ತನೆ; ರೇಣುಕಾಸ್ವಾಮಿ ಕೈಮುಗಿದು ಪದೇ ಪದೆ ಬೇಡಿಕೊಂಡರೂ ಬಿಡಲಿಲ್ಲವಂತೆ ದರ್ಶನ್

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಕೊಲೆ ಆರೋಪಿಗಳಾದ ದರ್ಶನ್​​ ​ಮತ್ತು ಗ್ಯಾಂಗ್​ ಸೇರಿ ಸುಮಾರು 17 ಆರೋಪಿಗಳ ವಿರುದ್ಧ ಕೇಸ್​ ದಾಖಲಾಗಿತ್ತು. ಇದೀಗ ಈ ಪ್ರಕರಣದ ಕುರಿತು ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಇಂದು 24ನೇ ಎ.ಸಿ.ಎಂ.ಎಂ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 17 ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿನ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳು ಸಂಗ್ರಹಿಸಿದ್ದಾರೆ. ಇದೀಗ 17 ಆರೋಪಿತರ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಇನ್ನು ದೋಷಾರೋಪಣಾ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 07 ಸಂಪುಟಗಳ 10 ಕಡತಗಳನ್ನು ಒಳಗೊಂಡಿರುವ ಚಾರ್ಜ್​ಶೀಟನ್ನು ಪೊಲೀಸರು ಸಲ್ಲಿಸಿದ್ದಾರೆ. ದರ್ಶನ್​​ ಮತ್ತು ಗ್ಯಾಂಗ್​ನಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತನಿಖೆಯನ್ನು ಬೆಂಗಳೂರು ಪೊಲೀಸ್​ ಆಯುಕ್ತರು ಬಿ.ದಯಾನಂದ, ಅಪರ ಪೊಲೀಸ್ ಆಯುಕ್ತರು ಪಶ್ಚಿಮ ವಲಯ ಸತೀಶ್‌ ಕುಮಾರ್​ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಗಿರೀಶ್.ಎಸ್. ಐ.ಪಿ.ಎಸ್ ರವರ ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಚಂದನ್‌ಕುಮಾರ್.ಎನ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ಒಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಮತ್ತು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ- 173(8) ಸಿಆರ್‌ಪಿಸಿ ಅಡಿಯಲ್ಲಿ ಘನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ದರ್ಶನ್​ ಕೇಸ್​ಗೆ ಬಿಗ್ ಟ್ವಿಸ್ಟ್​; 3991 ಪುಟಗಳ ಜಾರ್ಜ್​ಶೀಟ್ ಇಂದೇ ಸಲ್ಲಿಕೆ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಅಷ್ಟೊಂದು ಸಾಕ್ಷಿನಾ?’ ಜೈಲಲ್ಲಿ ದಂಗಾದ ದರ್ಶನ್.. ಚಾರ್ಜ್​ಶೀಟ್ ಪುಟಗಳ ಸಂಖ್ಯೆ ತಿಳಿದು ಹೇಳಿದ್ದೇನು?

https://newsfirstlive.com/wp-content/uploads/2024/09/DARSHAN-12.jpg

Load More