newsfirstkannada.com

ನನ್ನ ಸೆಲೆಬ್ರಿಟಿಗಳೇ ಗ್ರೇಟ್‌ ಗುರು.. ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಸ್ಪೆಷಲ್ ಮೆಸೇಜ್‌; ಏನಂದ್ರು?

Share :

Published February 19, 2024 at 5:25pm

  ಚಾಲೆಂಜಿಂಗ್ ಸ್ಟಾರ್ ದರ್ಶನ್ 47ನೇ ಹುಟ್ಟುಹಬ್ಬ ಸಖತ್ ಸ್ಪೆಷಲ್‌!

  ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಅನಂತ ಅನಂತ ವಂದನೆಗಳು

  ದರ್ಶನ್​ ಬೆಳ್ಳಿ ಹಬ್ಬದ ಸಂಭ್ರಮಿಸಿದ ಮಿಂದೆದ್ದ ಸೆಲೆಬ್ರಿಟಿಗಳಿಗೆ ಸಲಾಂ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮ ವಿಶೇಷವಾಗಿತ್ತು. ಸ್ಯಾಂಡಲ್‌ವುಡ್‌ ದಾಸನ 47ನೇ ವರ್ಷದ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಭರ್ಜರಿಯಾಗಿ ಆಚರಿಸಿದ್ದಾರೆ. ಬರ್ತ್ ಡೇ ದಿನ ದರ್ಶನ್​ ಅವರನ್ನು ನೋಡಲು ರಾಜ್ಯದ ಮೂಲೆ ಮೂಲೆಯಿಂದ ಅವರ ಅಭಿಮಾನಿಗಳು ಬಂದಿದ್ರು. ದರ್ಶನ್ ಮನೆ ಮುಂದೆ ಕಿಲೋಮೀಟರ್ ಗಟ್ಟಲೆ ಸಾಲಿನಲ್ಲಿ ನಿಂತುಕೊಂಡು ವಿಶ್​ ಮಾಡಿ ತೆರಳಿದ್ದರು.

ಹುಟ್ಟುಹಬ್ಬದ ಜೊತೆಗೆ ಕನ್ನಡ ಚಿತ್ರರಂಗಕ್ಕೆ ದರ್ಶನ್ ಎಂಟ್ರಿ ಕೊಟ್ಟು ಭರ್ತಿ 25 ವರ್ಷಗಳು ಆಗಿತ್ತು. ಹೀಗಾಗಿ ಶ್ರೀರಂಗಪಟ್ಟಣದಲ್ಲಿ ‘ಬೆಳ್ಳಿ ಪರ್ವ ಡಿ 25’ ಎಂಬ ಅದ್ಧೂರಿ ಕಾರ್ಯಕ್ರಮ ಮಾಡಲಾಯ್ತು. ಈ ಕಾರ್ಯಕ್ರಮವನ್ನು ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಏರ್ಪಡಿಸಿದ್ದರು. ಶ್ರೀ ಆದಿಚುಂಚನಗಿರಿ ಶ್ರೀಗಳು, ಶ್ರೀ ಸುತ್ತೂರು ಶ್ರೀಗಳು, ಬೇಬಿ ಮಠ ಶ್ರೀಗಳ ಸಾನಿಧ್ಯದಲ್ಲಿ ಹಾಗೂ ಸಂಸದೆ, ಚಿತ್ರನಟಿ ಸುಮಲತಾ ಅಂಬರೀಶ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೇರವೇರಿತ್ತು.

ಇದನ್ನು ಓದಿ: ’ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ; ನಾನ್ಯಾಕೆ ತಲೆ ಕೆಡಿಸಿಕೊಳ್ಳಲಿ’- ಮೌನಮುರಿದ ದರ್ಶನ್​

ಇದೀಗ ತಮ್ಮ ಹುಟ್ಟು ಹಬ್ಬಕ್ಕೆ ಶುಭಕೋರಿದ ಎಲ್ಲರಿಗೂ ವಂದನೆಗಳನ್ನು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿಕೊಂಡು ಹೀಗೆ ಬರೆದುಕೊಂಡಿದ್ದಾರೆ. ನನ್ನ ಪ್ರೀತಿಯ ಕೋರಿಕೆಗೆ ಬೆಲೆ ಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾ ಮಿತ್ರರು, ರಾಜಕೀಯ ಗಣ್ಯರು, ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಅನಂತ ಅನಂತ ವಂದನೆಗಳು. ಹುಟ್ಟು ಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದ ಅಭಿಮಾನಿಗಳಿಗೆ ನನ್ನ ಅಭಿನಂದನೆಗಳು. ಈ ನಿಮ್ಮ ಪ್ರೀತಿ-ಅಭಿಮಾನಕ್ಕೆ ಎಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ಧನ್ಯೋಸ್ಮಿ ಕರ್ನಾಟಕ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ನನ್ನ ಸೆಲೆಬ್ರಿಟಿಗಳೇ ಗ್ರೇಟ್‌ ಗುರು.. ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಸ್ಪೆಷಲ್ ಮೆಸೇಜ್‌; ಏನಂದ್ರು?

https://newsfirstlive.com/wp-content/uploads/2024/02/dboss-1-1.jpg

Load More