/newsfirstlive-kannada/media/post_attachments/wp-content/uploads/2024/06/darshan-wife.jpg)
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪೊಲೀಸ್ ವಶದಲ್ಲಿದ್ದಾರೆ. ಈ ಕೊಲೆ ಕೇಸ್ ಸಂಬಂಧ ದರ್ಶನ್ ಅಂಡ್ ಗ್ಯಾಂಗ್ ಅನ್ನು ನಿನ್ನೆ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಆದರೆ ಕೋರ್ಟ್ ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆರೋಪಿಗಳನ್ನು ನೀಡಿದೆ.
ಇದನ್ನೂ ಓದಿ:ದರ್ಶನ್, ಪವಿತ್ರಾ ಜೈಲು ಸೇರಿದ ಬೆನ್ನಲ್ಲೇ ಮತ್ತೆ ಬಿಗ್ ಟ್ವಿಸ್ಟ್ ಕೊಟ್ಟ ಪತ್ನಿ ವಿಜಯಲಕ್ಷ್ಮಿ
ಇನ್ನು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿರೋ ನಟ ದರ್ಶನ್ನಿಂದ ಆಪ್ತರು, ಕುಟುಂಬದವರು ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ದರ್ಶನ್ರ ತಾಯಿಯಾಗಲಿ, ಪತ್ನಿ, ಮಗ, ಸಹೋದರ ಆಗಲಿ ಯಾರು ಕೂಡ ಠಾಣೆಗೆ ಭೇಟಿ ನೀಡಿಲ್ಲ. ಇದೀಗ ಇದರ ಮಧ್ಯೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಿದ್ದಾರೆ. ಅರೆಸ್ಟ್ ಬಳಿಕ ಅವರ ಪತ್ನಿ ವಿಜಯಲಕ್ಷ್ಮಿ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ಡಿ-ಆ್ಯಕ್ಟಿವೇಟ್ ಮಾಡಿದ್ದರು. ಆದರೆ ಈಗ ಮತ್ತೆ ತಮ್ಮ ಇನ್ಸ್ಟಾ ಖಾತೆಯನ್ನು ಸಕ್ರಿಯಗೊಳಿಸಿದ್ದಾರೆ.
ಹೌದು, ಇಂದೊಂದು ಕೇಸ್ನಿಂದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ತುಂಬಾ ಬೇಸರಗೊಂಡು ಇನ್ಸ್ಟಾ ಖಾತೆಯನ್ನು ಡಿ-ಆಕ್ಟಿವೇಟ್ ಮಾಡಿಕೊಂಡಿದ್ದರು. ಸದ್ಯ ವಿಜಯಲಕ್ಷ್ಮಿ ಅವರು ತಮ್ಮ ಹಳೆ ಖಾತೆಯನ್ನೇ ಮತ್ತೆ ಸಕ್ರಿಯಗೊಳಿಸಿದ್ದಾರೆ. ಆದರೆ ತಾವು ಮಾಡಿದ್ದ ಎಲ್ಲ ಪೋಸ್ಟ್ಗಳನ್ನು ಡಿಲೀಟ್ ಮಾಡಿಕೊಂಡಿದ್ದಾರೆ. ಫಾಲೋ ಮಾಡುತ್ತಿದ್ದವರನ್ನು ಸಹ ಅನ್ಫಾಲೋ ಮಾಡಿಬಿಟ್ಟಿದ್ದಾರೆ. ಆದರೆ ಇನ್ಸ್ಟಾಗ್ರಾಮ್ ಖಾತೆ ಹೆಸರು ವಿಜಿ ದರ್ಶನ್ ಅಂತಲೇ ಇದೆ. ಆದರೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಸಾಕಷ್ಟು ಜನ ಅವರ ಹೆಸರಿಗೆ ಟ್ಯಾಗ್ ಮಾಡಿದ ವಿಡಿಯೋಗಳು ಮಾತ್ರ ಉಳಿದುಕೊಂಡಿವೆ. ಇದನ್ನು ನೋಡಿದ ಅಭಿಮಾನಿಗಳು ಮತ್ತೆ ಇನ್ಸ್ಟಾಗ್ರಾಮ್ ಖಾತೆಯನ್ನು ಸಕ್ರಿಯಗೊಳಿಸಿದ ಅವರು ಈ ಮೂಲಕ ಪ್ರಕರಣದ ಬಗ್ಗೆ ಮಾಹಿತಿ ನೀಡುತ್ತಾರೆಯೇ ಎಂಬ ಕುತೂಹಲ ಮೂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ