Advertisment

ದರ್ಶನ್ ಸೆಲೆಬ್ರಿಟಿಗಳೇ ಇಲ್ಲಿ ಕೇಳಿ.. ಅಭಿಮಾನಿಗಳಿಗೆ ವಿಜಯಲಕ್ಷ್ಮಿ ವಿಶೇಷ ಮನವಿ; ಹೇಳಿದ್ದೇನು?

author-image
Veena Gangani
Updated On
ದರ್ಶನ್ ಸೆಲೆಬ್ರಿಟಿಗಳೇ ಇಲ್ಲಿ ಕೇಳಿ.. ಅಭಿಮಾನಿಗಳಿಗೆ ವಿಜಯಲಕ್ಷ್ಮಿ ವಿಶೇಷ ಮನವಿ; ಹೇಳಿದ್ದೇನು?
Advertisment
  • ರೇಣುಕಾ ಕೊಲೆ ಕೇಸ್​ನಲ್ಲಿ A2 ಆರೋಪಿಯಾಗಿರೋ ನಟ ದರ್ಶನ್​
  • ದರ್ಶನ್​ನ್ನು ಭೇಟಿಯಾದ ಬೆನ್ನಲ್ಲೇ ಇನ್​ಸ್ಟಾದಲ್ಲಿ ಪತ್ನಿ ಪೋಸ್ಟ್​ ಶೇರ್
  • ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗುತ್ತಿದೆ ಈ ಪೋಸ್ಟ್​

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಸೇರಿ ಒಟ್ಟು 13 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೂ 4 ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ. ಮೊನ್ನೆಯಷ್ಟೇ ಕೊಲೆ ಕೇಸ್​ನಲ್ಲಿ ಜೈಲುಪಾಲಾದ ನಟ ದರ್ಶನ್​​ನನ್ನು ನೋಡಲು ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್​ ದರ್ಶನ್​ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರು.

Advertisment

publive-image

ಇದನ್ನೂ ಓದಿ:ಅಪರಿಚಿತ ವಾಹನ ಡಿಕ್ಕಿ.. ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಪ್ರಾಣಬಿಟ್ಟ ದರ್ಶನ್ ಅಭಿಮಾನಿ

ಇದೀಗ ಪತಿ ದರ್ಶನ್​ನನ್ನು ಭೇಟಿಯಾಗಿ ಬಂದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೊಸ ಪೋಸ್ಟ್​ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ತಾಳ್ಮೆ ಕಳೆದುಕೊಳ್ಳಬೇಡಿ ಅಂತ ಕರೆ ನೀಡಿದ್ದಾರೆ.

ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ 'ಸೆಲೆಬ್ರಿಟಿಗಳನ್ನು’ ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ.

Advertisment

ಸತ್ಯಮೇವ ಜಯತೆ

ಇನ್ನು, ಇದೇ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಇದೇ ಪೋಸ್ಟ್ ನೋಡಿದ ನಟ ದರ್ಶನ್ ಅಭಿಮಾನಿಗಳು, ನಮ್ಮ ಉಸಿರು ಇರುವವರೆಗೂ ಇರ್ತಿವಿ, ಸಾವಿರ ಜನ ಸಾವಿರ ಮಾತಾಡಲಿ ಬಾಸ್​ನ ಎಂದೆಂದಿಗೂ ಮರೆಯೋದಿಲ್ಲ ಬಿಡುವುದಿಲ್ಲ ಬಿಟ್ಟುಕೊಡುವುದಿಲ್ಲ ಬಾಸ್ ಹೊರಗಡೆ ಬಂದ್ರು ಬಾಸ್ ಮೇಲಿನ ಪ್ರೀತಿ ಎಂದೆಂದಿಗೂ ಕಡಿಮೆ ಆಗುವುದಿಲ್ಲ ಜೈ ಡಿ ಬಾಸ್ ​ ಅಂತಾ ಕಾಮೆಂಟ್​ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment