/newsfirstlive-kannada/media/post_attachments/wp-content/uploads/2024/11/Dhnanjay.jpg)
ಸ್ಯಾಂಡಲ್‌ವುಡ್‌ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ ಡಾಲಿ ಧನಂಜಯ್​ ಎಲ್ಲೇ ಹೋಗಲಿ, ಯಾವುದೇ ಕಾರ್ಯಕ್ರಮ ಭಾಗವಹಿಸಲಿ, ಮದುವೆ ಯಾವಾಗ? ಎಂಬ ಪ್ರಶ್ನೆ ಅವರಿಗೆ ಸದಾ ಎದುರಾಗುತ್ತಿತ್ತು. ಹಿರಿಯ ನಟರು, ಅಭಿಮಾನಿಗಳು ಡಾಲಿಗೆ ಈ ಪ್ರಶ್ನೆಯನ್ನು ಕೇಳುತ್ತಿದ್ದರು. ಪ್ರಶ್ನೆ ಕೇಳಿದಂತೆ ಡಾಲಿ ನಾಚಿ ನೀರಾಗುತ್ತಿದ್ದರು. ಆದರೀಗ ನಟ ಧನಂಜಯ್​​ ಕೊನೆಗೂ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಆ ಮೂಲಕ ಎಲ್ಲರ ಪ್ರಶ್ನೆಗೆ ಉತ್ತರ ಕೊಡಲು ಸಜ್ಜಾಗಿದ್ದಾರೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಅಭಿಮಾನಿಗಳಿಗೆ ಮದುವೆಯಾಗುವ ಬಗ್ಗೆ ಹೇಳಿಕೊಂಡಿದ್ದಾರೆ. ಮಾತ್ರವಲ್ಲದೆ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ನಟ ಡಾಲಿ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2024/11/Dhananjay-1.jpg)
ನಟ ಡಾಲಿ ಧನಂಜಯ್​ ಯಾರನ್ನು ಮದುವೆಯಾಗುತ್ತಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ನೆಲೆಸಿತ್ತು. ಅದರಲ್ಲೂ ಯುವತಿಯರಲ್ಲಿ ಈ ಕುತೂಹಲ ಜಾಸ್ತಿಯೇ ಇತ್ತು. ಚಿತ್ರರಂಗದವರಾ? ಅಥವಾ ಬೇರೆ ಕ್ಷೇತ್ರದವರಾ? ಎಂಬ ಪ್ರಶ್ನೆ ಎಲ್ಲರಲ್ಲೂ ಹುಟ್ಟಿಕೊಂಡಿತ್ತು. ಆದರೀಗ ಈ ಎಲ್ಲಾ ಕುತೂಹಲಕ್ಕೆ ಡಾಲಿ ತೆರೆ ಎಳೆದಿದ್ದಾರೆ.
ನಟ ಧನಂಜಯ್ ವೈದ್ಯೆಯನ್ನು ಕೈ ಹಿಡಿಯಲು ಮುಂದಾಗಿದ್ದಾರೆ. ಧನ್ಯತಾ ಎಂಬಾಕೆಯ ಜೊತೆಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಅಂದಹಾಗೆಯೇ ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಡಾಲಿ ಅನ್ನು ಕೈ ಹಿಡಿಯುತ್ತಿದ್ದಾರೆ.
/newsfirstlive-kannada/media/post_attachments/wp-content/uploads/2024/11/Dhananjay-2.jpg)
ಇದನ್ನೂ ಓದಿ: BBK11: ಯೋಚನೆ ಮಾಡದೆ ಒಂದೇ ಕರೆಗೆ ಬಿಗ್​ಬಾಸ್ ಮನೆಗೆ ಬಂದ ಗೌತಮಿ ಜಾಧವ್​; ಕಾರಣವೇನು?
ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ. ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಕೂಡ ಓದಿದ್ದು ಮೈಸೂರಿನಲ್ಲಿ. ಈಗ ಇವರಿಬ್ಬರು ತಮ್ಮ ಪ್ರೀತಿಗೆ ಮೂರು ಗಂಟು ಬಿಗಿಯಲು ಮುಂದಾಗಿದ್ದಾರೆ.
/newsfirstlive-kannada/media/post_attachments/wp-content/uploads/2024/11/Dhananjay-3.jpg)
ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಡಾಲಿ ಜೋಡಿ ಸುಂದರವಾಗಿ ಕಾಣಿಸುತ್ತಿದ್ದಾರೆ. ಕವನ ಹೇಳುತ್ತಾ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಅಂದಹಾಗೆಯೇ ಇಬ್ಬರ ಮದುವೆ ಫೆಬ್ರವರಿಯಲ್ಲಿ ನಡೆಯಲಿದೆ. ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ.
View this post on Instagram
ಇನ್ನು ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ. ಬೆಳಗ್ಗೆ ಮಾಂಗಲ್ಯ ಧಾರಣೆ ನಡೆಯಲಿಕ್ಕಿದೆ. ಅದೇ ದಿನ ಅದೆ ಗ್ರೌಂಡ್ ನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ. ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಎಮೋಷನಲಿ ಕನೆಕ್ಟ್ ಆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
 Follow Us