newsfirstkannada.com

ದರ್ಶನ್‌ ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಧ್ರುವ ಸರ್ಜಾ ಫ್ಯಾನ್ಸ್ ಬೆಂಬಲ; ಮಾಡಿದ್ದೇನು?

Share :

Published June 26, 2024 at 4:01pm

  ಸಾಂತ್ವನ ಹೇಳಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು

  ರೇಣುಕಾಸ್ವಾಮಿ ಕುಟುಂಬಸ್ಥರ ಜೊತೆ ಮಾತನಾಡಿದ ನಟ ಧ್ರುವ ಸರ್ಜಾ

  ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಧ್ರುವ ಫ್ಯಾನ್ಸ್‌

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪಟ್ಟಣಗೆರೆ ಶೆಡ್‌ನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕೊಲೆ ಆರೋಪದಲ್ಲಿ ನಟ ದರ್ಶನ್ ಅವರ ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿದೆ. ದರ್ಶನ್ ಸೇರಿ 13 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ರೆ 4 ಆರೋಪಿಗಳನ್ನು ತುಮಕೂರಿನ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಶರವೇಗದಲ್ಲಿ ನಡೆಯುತ್ತಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಾರ್ವಜನಿಕ ವಲಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದರೆ, ಕನ್ನಡ ಚಲನಚಿತ್ರ ರಂಗದಲ್ಲೂ ಹೊಸ ಕಂಪನಕ್ಕೆ ಕಾರಣವಾಗಿದೆ. ದರ್ಶನ್ ಗ್ಯಾಂಗ್‌ ಕ್ರೌರ್ಯದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿರುವಾಗಲೇ ಕೊಲೆಯಾದ ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ಸ್ಯಾಂಡಲ್‌ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ನಿಂತಿದ್ದಾರೆ.

ಧ್ರುವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಮತ್ತು ತಂಡ ಇಂದು ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದೆ. ಈ ಸಂದರ್ಭದಲ್ಲಿ ನಟ ಧ್ರುವ ಸರ್ಜಾ ದೂರವಾಣಿ ಮೂಲಕ ರೇಣುಕಾಸ್ವಾಮಿ ಕುಟುಂಬಸ್ಥರ ಜೊತೆ ಮಾತನಾಡಿ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ: VIDEO: ನಟ ದರ್ಶನ್​ ವಿರುದ್ಧದ ವಿಡಿಯೋ ಲೈಕ್​ ಮಾಡಿದ ಧ್ರುವ ಸರ್ಜಾ.. ಅದರಲ್ಲೇನಿತ್ತು? 

ಇದೇ ವೇಳೆ ಮಗನ ಸಾವಿನ ನೋವಿನಲ್ಲಿ ದಿನದೂಡುತ್ತಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ಧ್ರುವ ಸರ್ಜಾ ಅಭಿಮಾನಿಗಲು ಧನಸಹಾಯ ಮಾಡಿದ್ದಾರೆ.

ಧ್ರುವ ಸರ್ಜಾ ಹೇಳಿದ್ದೇನು?
ರೇಣುಕಾಸ್ವಾಮಿ ಹೆತ್ತವರಿ ಜೊತೆ ಮಾತನಾಡಿರುವ ನಟ ಧ್ರುವ ಸರ್ಜಾ, ನಿಮ್ಮೊಂದಿಗೆ ಸದಾ ನಾವು ಇದ್ದೀವಿ. ಏನೇ ಇದ್ದರೂ ನಮಗೆ ತಿಳಿಸಿ ಅಂತ ಮನವಿ ಮಾಡಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್‌ ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಧ್ರುವ ಸರ್ಜಾ ಫ್ಯಾನ್ಸ್ ಬೆಂಬಲ; ಮಾಡಿದ್ದೇನು?

https://newsfirstlive.com/wp-content/uploads/2024/06/renukswami.jpg

Load More