newsfirstkannada.com

‘ನನ್ನ ಗಂಡನಿಗೆ ನಾನೊಬ್ಬಳೇ ಹೆಂಡ್ತಿ’- ಡಿವೋರ್ಸ್‌ ರಿಜೆಕ್ಟ್ ಬೆನ್ನಲ್ಲೇ ದುನಿಯಾ ವಿಜಯ್ ಪತ್ನಿ ಖಡಕ್ ಮಾತು

Share :

Published June 14, 2024 at 3:08pm

  ದುನಿಯಾ ವಿಜಯ್ ವಿಚ್ಛೇದನ ತಿರಸ್ಕರಿಸಿದ ಫ್ಯಾಮಿಲಿ ಕೋರ್ಟ್

  ನನ್ನ ಪತಿ ಅಧಿಕೃತವಾಗಿ ಇನ್ನೊಂದು ಮದುವೆಯಾಗಲು ಅವಕಾಶ ಸಿಕ್ಕಿಲ್ಲ

  ಕಾನೂನಿನಲ್ಲಿ ವಿಚ್ಛೇದನ ಆದ ನಂತರನೇ ಇನ್ನೊಂದು ಮದುವೆಗೆ ಅವಕಾಶ

ಬೆಂಗಳೂರು: ನಟ ದುನಿಯಾ ವಿಜಯ್ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಸುದ್ದಿಯಾಗಿತ್ತು. ಹಲವು ವರ್ಷಗಳ ಬಳಿಕ ದುನಿಯಾ ವಿಜಯ್ ಅವರ ಡಿವೋರ್ಸ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಫ್ಯಾಮಿಲಿ ಕೋರ್ಟ್ ದುನಿಯಾ ವಿಜಯ್ ಅವರ ಮನವಿಯನ್ನು ತಿರಸ್ಕರಿಸಿದೆ.

ಪತ್ನಿ ನಾಗರತ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದ ದುನಿಯಾ ವಿಜಯ್ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ದುನಿಯಾ ವಿಜಯ್ ಮಾಡಿದ್ದ ಆರೋಪಗಳು ಸಾಬೀತಾಗುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ನಟ ದುನಿಯಾ ವಿಜಯ್ ಅವರ ವಿಚ್ಛೇದನದ ಅರ್ಜಿ ವಜಾಗೊಂಡಿದೆ.

ಇದನ್ನೂ ಓದಿ: ತಪ್ಪಿಸಿಕೊಳ್ಳೋಕೆ ಚಾನ್ಸೇ ಇಲ್ಲ.. ದರ್ಶನ್ ವಿರುದ್ಧ ಸಿಕ್ಕಿದೆ ಎನ್ನಲಾದ 16 ಸಾಕ್ಷಿಗಳ ಲಿಸ್ಟ್ ಇಲ್ಲಿದೆ..! 

ದುನಿಯಾ ವಿಜಯ್ ಅವರ ವಿಚ್ಛೇದನದ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ನಾಗರತ್ನ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸಮಸ್ತ ನಾಡಿನ ಜನತೆಗೆ ನನ್ನ ನಮಸ್ಕಾರ.. ಈ ದಿನ ನನಗೆ ತುಂಬಾ ಖುಷಿ ಕೊಟ್ಟ ದಿನವಾಗಿದೆ. ನನ್ನ ಪತಿ ವಿಜಯ್ ಅವರು ತಮಗೆ ವಿಚ್ಛೇದನ ಬೇಕೆಂದು ಸ್ವಲ್ಪ ವರ್ಷಗಳ ಹಿಂದೆ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಆ ಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ, ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲ.

ಇದು ನನ್ನ ಜಯ ಅನ್ನೋದಕ್ಕಿಂತ ನನ್ನ ಪತಿ ಅಧಿಕೃತವಾಗಿ ಇನ್ನೊಂದು ಮದುವೆಯಾಗಲು ಅವಕಾಶ ಸಿಕ್ಕಿಲ್ಲ. ನನಗೆ ನನ್ನ ಅಪ್ಪ, ಅಮ್ಮ ಮದುವೆ ಮಾಡಿಕೊಟ್ಟಾಗ ಹೇಳಿದ್ದು, ಕಲಿಸಿದ್ದು ಒಂದೇ. ಗಂಡನೇ ದೇವರು, ಅತ್ತೆ ಮಾವನೇ ನಿಮ್ಮವರು. ಗಂಡನ ಮನೆಯೇ ನಿನ್ನ ಮನೆ, ಎಷ್ಟೇ ಕಷ್ಟಗಳು, ಏನೇ ಸಮಸ್ಯೆ ಬಂದರೂ ಅದೇ ಮನೆಯಲ್ಲೇ ಇರ್ಬೇಕು ಅವರೇ ನಿನಗೆ ಎಲ್ಲಾ ಎಂದಿದ್ದರು. ನಾನೂ ಅದನ್ನೇ ಪಾಲಿಸಿಕೊಂಡು ಬಂದವಳು. ಅದನ್ನೇ ಪಾಲಿಸಿಕೊಂಡು ಹೋಗುವಳು.

ನನಗೆ ನನ್ನ ಗಂಡ ಮಕ್ಕಳು ಇಷ್ಟೇ ಸರ್ವಸ್ವ. ನನ್ನ ಜೀವ ಇರುವವರೆಗೂ ಅವರ ಜೊತೆಯಲ್ಲೇ ಇದ್ದು ಸಾಯುತ್ತೇನೆ. ನಮ್ಮ ಕಾನೂನಿನ ಪ್ರಕಾರ ವಿಚ್ಛೇದನ ಆದ ನಂತರನೇ ಇನ್ನೊಂದು ಮದುವೆಗೆ ಅವಕಾಶ ಇರುವುದು ಎಂಬ ಸತ್ಯ ನಿಮಗೂ ಗೊತ್ತು. ನನ್ನ ಪತಿ ಇನ್ನೊಂದು ಮದುವೆಯಾಗಿಲ್ಲ ಎಂದು ಅವರೇ ನಮಗೆ ಹೇಳಿರುತ್ತಾರೆ.

ಇದನ್ನೂ ಓದಿ: ಸರಿ ಎಂದು ವಿವಾಹವಾದ ಬಿಗ್​ ಬಾಸ್​​ ಸಿರಿ! ಸದ್ದಿಲ್ಲದೆ ಹಸೆಮಣೆ ಏರಿದ ಸೀರಿಯಲ್ ​ನಟಿ  

ಈ ಕೇಸಿನಲ್ಲಿ ನಮ್ಮ ವಕೀಲರಾದ ಬಿ.ಎನ್ ನಾಗರಾಜ್ ಅವರ ಶ್ರಮ ಅಪಾರವಾದುದು. ದಯವಿಟ್ಟು ಬೇರೆ ವದಂತಿಗಳಿಗೆ ಕಿವಿ ಕೊಡದೆ, ನಿಮ್ಮ ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಸಮಸ್ತ ನಾಡಿನ ಜನತೆಗೆ ಈ ಮೂಲಕ ಕೇಳಿಕೊಳ್ಳುತ್ತೇನೆ.

ದಯವಿಟ್ಟು ಮಾಧ್ಯಮ ಮಿತ್ರರಿಗೆ ಕೇಳಿ ಕೊಳ್ಳುವುದೇನೆಂದರೆ ಕೀರ್ತಿ ಪಟ್ಟಡಿಯನ್ನು 2ನೇ ಹೆಂಡ್ತಿ ಅಂತ ದಯವಿಟ್ಟು ಪ್ರಸಾರ ಮಾಡಬೇಡಿ. ನಮ್ಮ ಸಂಸಾರ ಚೆನ್ನಾಗಿರಲಿ ಅಂತಾ ಹರಸಿ ಹಾರೈಸಿ ಎಂದು ನಾಗರತ್ನ ಅವರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ನನ್ನ ಗಂಡನಿಗೆ ನಾನೊಬ್ಬಳೇ ಹೆಂಡ್ತಿ’- ಡಿವೋರ್ಸ್‌ ರಿಜೆಕ್ಟ್ ಬೆನ್ನಲ್ಲೇ ದುನಿಯಾ ವಿಜಯ್ ಪತ್ನಿ ಖಡಕ್ ಮಾತು

https://newsfirstlive.com/wp-content/uploads/2024/06/Duniya-Vijay-Wife-Nagarathna.jpg

Load More