/newsfirstlive-kannada/media/post_attachments/wp-content/uploads/2025/05/Actor-Jaggesh-On-kamal-hassan.jpg)
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು. ಥಗ್ ಲೈಫ್ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಈ ಮಾತು ಹೇಳಿದ ನಟ ಕಮಲ್ ಹಾಸನ್ ಅವರು ಕನ್ನಡಿಗರನ್ನು ಕೆಣಕಿದ್ದಾರೆ. ನಟ ಶಿವರಾಜ್ ಕುಮಾರ್ ಮುಂದೆಯೇ ತಮಿಳಿನಿಂದ ಕನ್ನಡ ಹುಟ್ಟಿದೆ ಅಂತ ಹೇಳೋ ಮೂಲಕ ಕನ್ನಡಿಗರ ಹೋರಾಟಕ್ಕೆ ಕಿಚ್ಚು ಹಚ್ಚಿದ್ದಾರೆ.
ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಸ್ವತಂತ್ರ್ಯ ಲಿಪಿ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ಕೋಟ್ಯಾಂತರ ಕರುನಾಡಿಗರ ಜೀವನಾಡಿಯಾಗಿರುವ ನಮ್ಮ ಕನ್ನಡ ಭಾಷೆಗೆ ನಟ ಕಮಲ್ ಹಾಸನ್ ಅವಮಾನಿಸಿದ್ದು ಸ್ವಾಭಿಮಾನಿ ಕನ್ನಡಿಗರು ನಿಜಕ್ಕೂ ಕೆರಳುವಂತೆ ಮಾಡಿದೆ.
ಕಮಲ್ ಹಾಸನ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ಶುರುವಾಗಿವೆ. ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಕನ್ನಡ ಪರ ಸಂಘಟನೆಗಳು ಕಮಲ್ ಹಾಸನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸ್ತಿದೆ.
ಕನ್ನಡಿಗರ ಹೋರಾಟದ ಬೆನ್ನಲ್ಲೇ ನವರಸನಾಯಕ ನಟ ಜಗ್ಗೇಶ್ ಅವರು ಕಮಲ್ ಹಾಸನ್ ಹೇಳಿಕೆಯನ್ನ ಖಂಡಿಸಿದ್ದಾರೆ.
ಕಲೆಗೆ ಜಾತಿ ಇಲ್ಲ. ಎಲ್ಲಾ ಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ. ಆ ನಿಟ್ಟಿನಲ್ಲಿ ಕಮಲ್ ಹಾಸನ್ ಅವರ ಮೆಚ್ಚಿದ್ದೇವೆ.
ಇದನ್ನೂ ಓದಿ: ಕನ್ನಡ ಭಾಷೆ ಬಗ್ಗೆ ನಾಲಿಗೆ ಹರಿಬಿಟ್ಟಿರುವ ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ
ಅಂದ ಮಾತ್ರಕ್ಕೆ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರ ಮಾತು ಒಪ್ಪೋದಿಲ್ಲ. ಕನ್ನಡಕ್ಕೆ 2.5 ಸಾವಿರ ವರ್ಷದ ಇತಿಹಾಸವಿದೆ. ಅಷ್ಟೇ ಏಕೆ ಹನುಮ ದೇವರು ಕನ್ನಡ ಕಲಿಪುಂಗವ ಅವನ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್ ಎಂದು ಜಗ್ಗೇಶ್ ಅವರು ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ