/newsfirstlive-kannada/media/post_attachments/wp-content/uploads/2024/04/kamal-Hassan.jpg)
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂದು ಹೇಳಿರುವ ನಟ ಕಮಲ್ ಹಾಸನ್ ಅವರು ತಮ್ಮ ಮೊಂಡಾಟ ಮುಂದುವರಿಸಿದ್ದಾರೆ. ಕನ್ನಡಿಗರ ಕ್ಷಮೆ ಕೇಳಲು ನಿರಾಕರಿಸಿರುವ ಕಮಲ್ ಹಾಸನ್ ಅವರು ತಮ್ಮ ಥಗ್ ಲೈಫ್ ಸಿನಿಮಾದ ಪ್ರಮೋಷನ್‌ಗಾಗಿ ದುಬೈ, ಸಿಂಗಾಪುರಕ್ಕೆ ತೆರಳಿದ್ದಾರೆ.
ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾ ಬಿಡುಗಡೆ ವಿರೋಧಿಸಿ ಕನ್ನಡಿಗರು ಹೋರಾಟಕ್ಕೆ ಸಜ್ಜಾಗಿದ್ದಾರೆ. ಕನ್ನಡಿಗರ ಆಕ್ರೋಶಕ್ಕೆ ಸೊಪ್ಪು ಹಾಕದ ನಟ ಕಮಲ್ ಹಾಸನ್ ಅವರು ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
/newsfirstlive-kannada/media/post_attachments/wp-content/uploads/2025/06/thug-life-Kamal-Hassan.jpg)
ಕರ್ನಾಟಕದಲ್ಲಿ ತಮ್ಮ ಥಗ್ ಲೈಫ್ ಸಿನಿಮಾ ಬಿಡುಗಡೆ ಹಾಗೂ ಪ್ರದರ್ಶನಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಚಿತ್ರ ಪ್ರದರ್ಶನವನ್ನು ತಡೆಯದಂತೆ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸೂಚಿಸಬೇಕು. ಸಿನಿಮಾ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ರಾಜ್ಯ ಪೊಲೀಸ್ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ನಟ ಕಮಲ್ ಹಾಸನ್ ಅವರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಸಿನಿಮಾ ಸ್ಕ್ರಿಪ್ಟ್ ಹೇಳಿ ಬರುವಾಗ ಎದೆ ನೋವು.. ತಮಿಳು ನಿರ್ದೇಶಕ ವಿಕ್ರಮ್ ಸುಗುಮಾರನ್​ ನಿಧನ
/newsfirstlive-kannada/media/post_attachments/wp-content/uploads/2023/06/HIGHCOURT.jpg)
ಇದೇ ಜೂನ್ 5ಕ್ಕೆ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗುತ್ತಿದೆ. ತಮ್ಮ ಒಡೆತನದ ರಾಜಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಸಂಸ್ಥೆಯ ಸಿಇಒ ಮೂಲಕ ಕಮಲ್ ಹಾಸನ್ ಈ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕಮಲ್ ಹಾಸನ್ ಅವರು ಸಲ್ಲಿಸಿರುವ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us