newsfirstkannada.com

‘ತಪ್ಪು ಮಾಡಿದ್ದರೆ ಶಿರಬಾಗಿ ದಂಡ ಕಟ್ಟುತ್ತೇನೆ’- ಕೊನೆಗೂ ಮೌನ ಮುರಿದ ಮಾಣಿಕ್ಯ; ನಿರ್ಮಾಪಕನಿಗೆ ಕಿಚ್ಚ ಸುದೀಪ್‌ ಖಡಕ್ ಸವಾಲು

Share :

10-07-2023

  ನಿರ್ಮಾಪಕ ಎನ್. ​ಕುಮಾರ್ ಆರೋಪಕ್ಕೆ ಫುಲ್‌ ಗರಂ ಆದ ರನ್ನ

  ಕುಮಾರ್ ಅವರ ಸಮಸ್ಯೆಗಳಿಗೆ ನಾನು ಕಾರಣ ಅನ್ನೋದು ಸರಿಯಲ್ಲ

  27 ವರ್ಷಗಳ ಕಾಲ ವೃತ್ತಿ ಬದುಕಿನಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ

ಸ್ಯಾಂಡಲ್‌ವುಡ್ ನಿರ್ಮಾಪಕ ಎನ್. ​ಕುಮಾರ್​ ಹಾಗೂ ಕಿಚ್ಚ ಸುದೀಪ್ ಮಧ್ಯೆ ನಡೆಯುತ್ತಿದ್ದ ಕೋಟಿ, ಕೋಟಿ ಆರೋಪದ ಕಿತ್ತಾಟಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಇಷ್ಟು ದಿನ ಸೈಲೆಂಟ್‌ ಆಗಿದ್ದ ಕಿಚ್ಚ ಸುದೀಪ್ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ಇಷ್ಟು ದಿನ ತಮ್ಮ ವಿರುದ್ಧ ತಿರುಗಿಬಿದ್ದ ನಿರ್ಮಾಪಕ ಎನ್‌. ಕುಮಾರ್‌ ಗಂಭೀರ ಆರೋಪಕ್ಕೆ ಸುದೀಪ್ ಅವರು ಖಡಕ್ ಉತ್ತರ ಕೊಟ್ಟಿದ್ದಾರೆ.

ಫಿಲ್ಮ್‌ ಚೇಂಬರ್‌ಗೆ ಸುದೀರ್ಘ ಪತ್ರ ಬರೆದಿರುವ ಕಿಚ್ಚ ಸುದೀಪ್‌ ಅವರು, ನನ್ನ ಮೇಲೆ ನಿರ್ಮಾಪಕರು ನಿರಾಧಾರವಾಗಿ ಆರೋಪ ಮಾಡಿದ್ದಾರೆ. ಮಾನವೀಯತೆಯ ದೃಷ್ಟಿಯಿಂದ ನಿರ್ಮಾಪಕರಿಗೆ ಸಹಾಯ ಮಾಡಲು ಕೂಡ ನಾನು ಮುಂದಾಗಿದ್ದೆ. ಆದರೆ ಕಾರಣಾಂತರಗಳಿಂದ ಅದು ಸಾಧ್ಯ ಆಗಲಿಲ್ಲ. ಈ ವಿಚಾರವನ್ನು ಕಾನೂನಿನ ರೀತಿಯಲ್ಲಿ ಬಗೆಹರಿಸಲು ನಿರ್ಧರಿದ್ದೇನೆ. ಕುಮಾರ್ ಅವರ ವೈಯಕ್ತಿಕ ಸಮಸ್ಯೆಗಳಿಗೆ ನಾನು ಕಾರಣ ಅನ್ನೋದು ಸರಿಯಲ್ಲ. ಸೂಕ್ತ ದಾಖಲೆಗಳು ಇಲ್ಲದೆ ಕುಮಾರ್ ಅವರು ಆರೋಪ ಮಾಡುವುದು ಸರಿಯಲ್ಲ. ನಾನು ತಪ್ಪು ಮಾಡಿದ್ದರೆ ನ್ಯಾಯಾಲಯದಲ್ಲಿ ಶಿರಬಾಗಿ ದಂಡ ಕಟ್ಟುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದೀಪ್ ಸುದೀರ್ಘ ಉತ್ತರದಲ್ಲಿ ಏನಿದೆ?
ಎಲ್ಲರಿಗೂ ನಮಸ್ಕಾರ, ಕನ್ನಡ ಚಿತ್ರರಂಗ ಮಹಾನ್ ಸಾಧಕರಿಂದ ಬೆಳೆದು ನಿಂತಿದೆ. ಅವರೆಲ್ಲರ ಸಾಧನೆಯ ನಡುವೆ, ನನ್ನದೂ ಒಂದು ಅಳಿಲು ಸೇವೆ ಇದೆ. ಅಂತಹ ಮಹಾನ್ ಸಾಧಕರೆದುರು ನಾನು ತುಂಬಾ ಕಿರಿಯವ ಈ ಕಳೆದ 27 ವರ್ಷಗಳಲ್ಲಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ಕಲಾವಿದನಾಗಿ, ಬರಹಗಾರ, ಗಾಯಕ, ಇತ್ಯಾದಿ ಇತ್ಯಾದಿ ಆಗಿ ನಾನು ಈ ಪತ್ರವನ್ನು ನಿಮಗೆ ಬರೆಯುತ್ತಿಲ್ಲ. ಚಿತ್ರೋದ್ಯಮದಲ್ಲಿ ಆ 27 ವರ್ಷಗಳ ಕಾಲ ಕಾಪಾಡಿಕೊಂಡು ಬಂದ ಒಳ್ಳೆಯತನ ಮತ್ತು ಮಾನವೀಯತೆಯ ಆಧಾರದಲ್ಲಿ, ಈ ಮೇಲ್ಕಂಡ ಸಂಸ್ಥೆಗಳ ಮೇಲಿನ ಗೌರವಾಧಾರದ ಮೇಲೆ ಈ ಪತ್ರವನ್ನು ಬರೆಯುತ್ತಿದ್ದೇನೆ.

ವಾಣಿಜ್ಯ ಮಂಡಳಿಗೆ ನಿರ್ಮಾಪಕರೊಬ್ಬರು ಮೊರೆ ಬಂದಿರುವುದು ಸರಿ ಅಷ್ಟೇ. ಸ್ಪಂದಿಸಬೇಕಾದುದ್ದು ನಿಮ್ಮ ಕರ್ತವ್ಯ ನೀವು ಸ್ಪಂದಿಸಿದ್ದೀರಿ. ಆ ಬಗ್ಗೆ ನನಗೆ ಯಾವುದೂ ತಕರಾರು ಇರುವುದಿಲ್ಲ. ಆದರೂ, ಯಾವುದೇ ನಿರ್ಮಾಪಕರು, ಯಾರೇ ಕಲಾವಿದರ ತಂತ್ರಜ್ಞರ ಮೇಲೆ ನಿರಾಧಾರ ಸುಳ್ಳು ಆರೋಪಗಳನ್ನು ಮಾಡುವಾಗ, ಕನಿಷ್ಠ ದಾಖಲಾತಿಗಳನ್ನು ಪರಿವೀಕ್ಷಿಸುವುದು ಮಾತ್ರ ಸಂಸ್ಥೆಗಳಾದ ನಿಮ್ಮದೂ ಜವಾಬ್ದಾರಿ ಆಗಿರುತ್ತದೆಂದು ವಿನಮ್ರತೆಯಿಂದ ಮನವಿ ಮಾಡುತ್ತೇನೆ. ಈ ಹಿಂದೆ ನೀವು ಇದನ್ನೆಲ್ಲ ಪರಿಶೀಲಿಸಲಿಲ್ಲವೆಂದಲ್ಲ. ಈ ಬಾರಿ ನನ್ನ ವಿಚಾರದಲ್ಲಿ ಅದೇಕೋ ನಡೆಯುತ್ತಿಲ್ಲ, ಕಾರಣವೂ ನನಗೆ ತಿಳಿಯುತ್ತಿಲ್ಲ.

27 ವರ್ಷಗಳ ಕಾಲ ನಾನು ಎಂದಾದರೂ ಒಂದೇ ಒಂದು ಕಪ್ಪು ಚುಕ್ಕೆ ಬೀಳುವಂತೆ ನಡೆದುಕೊಂಡಿಲ್ಲ. 80 ವರ್ಷಗಳ ಕಾಲ ಚಿತ್ರರಂಗದ ರಥ ಎಳೆದು ಬಂದಿರುವುದು, ಈ ನಂಬಿಕೆ ಎಂಬ ಹಗ್ಗದ ಮೇಲೆಯೇ ಆ ನಂಬಿಕೆಯ ಹಗ್ಗದ ಮೇಲೆಯೇ ನಾನು ವಿಶೇಷ ಪಾತ್ರಗಳನ್ನು ಹೊರತು ಪಡಿಸಿ 45 ಸಿನಿಮಾಗಳಲ್ಲಿ ದಾಖಲೆಯಾಗಿ ಉಳಿದಿದ್ದೇನೆ. ನನಗೂ ಬಹುಪಾಲು ನಿರ್ಮಾಪಕರಿಂದ ಹಣ ಬರಬೇಕಿದೆ. ಎಂದಾದರೂ ಮಂಡಳಿಯ ಕದ ತಟ್ಟಿದ್ದೇನೆಯೇ? ಈ ವರೆಗೂ ಈ ನಿಮ್ಮ ಪ್ರೀತಿಯ ಸುದೀಪ ಒಳ್ಳೆತನಕ್ಕೆ ಉದಾಹರಣೆ ಆಗಿದ್ದಾನೆ ಹೊರತು ಕೆಟ್ಟ ತನಕಲ್ಲ.

ಈ ಮೇಲ್ಕಂಡ ಕಾರಣಕ್ಕೆ ನಾನು ಎರಡು ವಿನಂತಿಗಳನ್ನು ತಮ್ಮಲ್ಲಿ ಮಾಡಿಕೊಳ್ಳುತ್ತೇನೆ. ಯಾರೇ ನಿಮ್ಮಲ್ಲಿ ದೂರಿಟ್ಟರೂ, ಯಾವುದೇ ಕಲಾವಿದರು ಇರಬಹುದು. ತಂತ್ರಜ್ಞರು ಇರಬಹುದು. ಯಾವುದೇ ವಿಭಾಗದವರು ಇರಬಹುದು. ಆ ದೂರಿನ ಕುರಿತಾದ ಸಾಕ್ಷಾಧಾರಗಳನ್ನು ಪರಿಶೀಲಿಸಿ ಮುಂದುವರೆಯಿರಿ. ಮತ್ತು ಈ ಕೆಟ್ಟ ಪರಂಪರೆಗೆ ನಾಂದಿ ಹೇಳುವುದಕ್ಕೆ ನಾವು ಯಾರು ಹೊಣೆಗಾರರಾಗುವುದು ಬೇಡ.

ದಯಮಾಡಿ ತಾವು ಸಂದಿಗ್ಧತೆಗೆ ಒಳಗಾಗದೆ, ನನ್ನ ಮೇಲೂ ಬಲವಂತದ ಒತ್ತಡ ಹಾಕದೆ, ನ್ಯಾಯಾಲಯದಲ್ಲೇ ಇದನ್ನು ಬಗೆಹರಿಸಿಕೊಳ್ಳಲು ಬಿಡಿ. ನಾನೇನಾದರೂ ತಪ್ಪು ಮಾಡಿದ್ದರೆ ನ್ಯಾಯಾಲಯದಲ್ಲೇ ಶಿರಬಾಗಿ ಒಪ್ಪಿಕೊಂಡು ದಂಡ ಕಟ್ಟುತ್ತೇನೆ. ನಾನು ಸರಿ ಇದ್ದೇನೆ. ನ್ಯಾಯ ಮತ್ತು ಸತ್ಯ ನನ್ನೊಂದಿಗಿದೆ ಎಂದು ಸಾಬೀತು ಮಾಡಿಕೊಳ್ಳಲು ನಂಗೊಂದಿಷ್ಟು ಅವಕಾಶ ಕೊಡಿ ಎಂದು ಪ್ರೀತಿಯಿಂದ ಕೇಳಿಕೊಳ್ಳುತ್ತಾ. ಎಂದೆಂದಿಗೂ ನಿಮ್ಮವ ಎಂದು ಕಿಚ್ಚ ಸುದೀಪ್ ಪತ್ರ ಬರೆದಿದ್ದಾರೆ.

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ 

‘ತಪ್ಪು ಮಾಡಿದ್ದರೆ ಶಿರಬಾಗಿ ದಂಡ ಕಟ್ಟುತ್ತೇನೆ’- ಕೊನೆಗೂ ಮೌನ ಮುರಿದ ಮಾಣಿಕ್ಯ; ನಿರ್ಮಾಪಕನಿಗೆ ಕಿಚ್ಚ ಸುದೀಪ್‌ ಖಡಕ್ ಸವಾಲು

https://newsfirstlive.com/wp-content/uploads/2023/07/Kiccha-Sudeep-3.jpg

Load More