newsfirstkannada.com

ನೇಹಾ ಕೊಲೆ; ಒಬ್ಬನ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ತಪ್ಪು ಎಂದ ನಟ ಕಿಶೋರ್​

Share :

Published April 20, 2024 at 8:39pm

    ಆರೋಪಿ ಫಯಾಜ್‌ ವಿರುದ್ಧ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಭಾರೀ ಆಕ್ರೋಶ

    ಬಾಳಿ ಬದುಕಬೇಕಾದ ನೇಹಾಳ ಜೀವ ಕೊನೆಯಾಗಿದ್ದು ನಿಜಕ್ಕೂ ಅಕ್ಷಮ್ಯ ಅಪರಾಧ

    ನೇಹಾ ಸಾವನ್ನು ಕೋಮು ಬಣ್ಣ ಬಳಿದು ದ್ವೇಷ ಹೆಚ್ಚಿಸುವುದು ರಾಜಕೀಯ ಉದ್ದೇಶ!

ಹುಬ್ಬಳ್ಳಿ ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ್ ಅವರ ಬರ್ಬರ ಹತ್ಯೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. 11 ಬಾರಿ ಕುತ್ತಿಗೆಗೆ ಇರಿದು ಕೊಂದ ಆರೋಪಿ ಫಯಾಜ್‌ ವಿರುದ್ಧ ದಿನದಿಂದ ದಿನಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಅಂತ ಕರುನಾಡಿನ ಜನತೆ ಒತ್ತಾಯ ಮಾಡುತ್ತಿದ್ದಾರೆ.

ಇದೀಗ ಬಹುಭಾಷಾ ನಟ ಕಿಶೋರ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ನೇಹಾ ಕೊಲೆ ಕೇಸ್​ ಸಂಬಂಧ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಬಾಳಿ ಬದುಕಬೇಕಾದ ನೇಹಾಳ ಜೀವ ಕೊನೆಯಾಗಿದ್ದು ನಿಜಕ್ಕೂ ಅಕ್ಷಮ್ಯ ಅಪರಾಧ. ಒಂದು ನಾಗರೀಕ ಸಮಾಜವಾಗಿ ಇದು ನಮ್ಮೆಲ್ಲರ ಸೋಲು. ಈಗಾಗಲೇ ಸಾಕ್ಷಿ ಸಮೇತ ಬಂಧಿತವಾಗಿರುವ ಅಪರಾಧಿಗೆ ಮತ್ಯಾರೂ ಈ ರೀತಿ ಕೃತ್ಯವೆಸಗನಂತೆ ತನಿಖೆ ಮತ್ತು ಅತಿ ಕಠಿಣ ಶಿಕ್ಷೆ ಆಗುವುದರ ಜೊತೆಗೆ ಮಹಿಳೆಯರ ವಿರುದ್ಧ ದಿನೇ ದಿನೇ ಹೆಚ್ಚುತ್ತಿರುವ ಅಪರಾಧಗಳು ಅದರ ಮೂಲ ಕಾರಣಗಳನ್ನು ನಿಯಂತ್ರಿಸಲು ಜಾಗೃತಿ ಹೆಚ್ಚಿಸಲು ನಾವು ಮತ್ತು ಸರ್ಕಾರಗಳು ಸಾಧ್ಯ ಕ್ರಮಗಳೆಲ್ಲವನ್ನೂ ಕೈಗೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಗಳನ್ನು ನೆನೆದು ಬಿಕ್ಕಿಬಿಕ್ಕಿ ಅತ್ತ ತಾಯಿ; ನೇಹಾ ಬಗ್ಗೆ ಗೀತಾ ಹಿರೇಮಠ ಹೇಳಿದ್ದೇನು?

View this post on Instagram

A post shared by Kishore Kumar Huli (@actorkishore)

ಜೊತೆಗೆ ದುರಂತವೆಂದರೆ ಯಾವುದೇ ಶಿಕ್ಷೆ ನೇಹಾಳನ್ನು ತಿರುಗಿ ತರಲಾಗದು. ಆದರೆ ನಮ್ಮ ಕೈಲಿ ಸಾಧ್ಯವಾದದ್ದು ಮತ್ಯಾರೂ ನೇಹಾಳಂತೆ ಬಲಿಯಾಗದಿರುವಂಥ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದು. ಆದರೆ ಈ ನೋವಿನ ಕ್ಷಣದಲ್ಲೂ ಅದರಲ್ಲಿ ಹಿಂದೂ ಮುಸ್ಲಿಂ ಮಾಡುವುದು ಎಷ್ಟು ಸರಿ? ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ? ದಿನಕ್ಕೆ 78 ಕೊಲೆಗಳಾಗುವ, ಮಹಿಳೆಯರ ವಿರುದ್ಧ ದಿನಕ್ಕೆ 1224 ಅಪರಾಧಗಳಾಗುವ ನಾಡಿನಲ್ಲಿ ಎಷ್ಟು ಹಿಂದೂ ಎಷ್ಟು ಕ್ರೈಸ್ತ ಅಪರಾಧಿಗಳು? ಹಾಗೆಂದರೆ ಆ ಧರ್ಮದ ನಾವೆಲ್ಲರೂ ಅಪರಾಧಿಗಳೇ? ಹಾಗೆ ನೋಡಿದರೆ ಎಷ್ಟು ಅಂತರ್ಧರ್ಮೀಯ ಜೋಡಿಗಳು ಅನ್ಯೊನ್ಯವಾಗಿ ಬಾಳುತ್ತಿಲ್ಲ? ಅದಕ್ಕೆ ಆ ಧರ್ಮಗಳೂ ಅದರ ಜನರೂ ಜವಾಬ್ದಾರಿಯೇ ? ಹೇಗೆ? ಅಪರಾಧಿಗೆ ನ್ಯಾಯ ಕೊಡಿಸಲು ಶ್ರಮಿಸಿವುದನ್ನು ವಿರೋಧ ಪಕ್ಷವಾಗಲೀ ಯಾರಾಗಲೀ ಮಾಡಿದರೆ ಒಪ್ಪಲೇಬೇಕು. ಅದು ಅವರ ಕರ್ತವ್ಯ. ಆದರೆ ಒಡೆದಾಳುವ ಈ ಧರ್ಮಾಂಧ ಜನ ನೇಹಾ ಸಾವನ್ನು ಕೋಮು ಬಣ್ಣ ಬಳಿದು ಜನರಲ್ಲಿ ದ್ವೇಷ ಹೆಚ್ಚಿಸಿ ರಾಜಕೀಯ ಉದ್ದೇಶಕ್ಕೆ ಬಳಸುವುದು ಕೊಲೆಯಷ್ಟೇ ಘೋರ ಅಪರಾಧ ಎಂದು ಬರೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನೇಹಾ ಕೊಲೆ; ಒಬ್ಬನ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ತಪ್ಪು ಎಂದ ನಟ ಕಿಶೋರ್​

https://newsfirstlive.com/wp-content/uploads/2024/04/fayaz.jpg

Load More