ನಾಗಭೂಷಣ್ ವಿರುದ್ಧ ಚಾರ್ಜ್ಶೀಟ್ ಹಾಕಿರುವ ಪೊಲೀಸರು
60 ಸಾಕ್ಷಿಗಳನ್ನು ಕಲೆ ಹಾಕಿದ ಕುಮಾರಸ್ವಾಮಿ ಟ್ರಾಫಿಕ್ ಪೊಲೀಸ್
80 ಪುಟಗಳ ಚಾರ್ಜ್ಶೀಟ್ ಸಲ್ಲಿಸಿರುವ ಸಂಚಾರಿ ಪೊಲೀಸರು
ಬೆಂಗಳೂರು: ಟಗರು ಪಲ್ಯ ನಟ ನಾಗಭೂಷಣ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಪಘಾತ ಕೇಸ್ಗೆ ಸಂಬಂಧಪಟ್ಟಂತೆ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ.
ಕಳೆದ ಅಕ್ಟೋಬರ್ 30ರಂದು ಬೆಂಗಳೂರಿನ ಕೋಣನ ಕುಂಟೆ ಸಮೀಪ ಕಾರು ಅಪಘಾತ ಸಂಭವಿಸಿತ್ತು. ನಾಗಭೂಷಣ್ ಓಡಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.
ಸದ್ಯ ಆ್ಯಕ್ಸಿಡೆಂಟ್ ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಪೊಲೀಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 60 ಸಾಕ್ಷಿಗಳನ್ನು ಕಲೆಹಾಕಲಾಗಿದೆ. ಸಿಸಿಟಿವಿ ಮಾತ್ರವಲ್ಲದೆ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನ ದಾಖಲಿಸಿದ್ದಾರೆ. ಈ ಅಪಘಾತದ ವೇಳೆ ಪ್ರೇಮ ಅವರು ಸ್ಥಳದಲ್ಲೇ ಮೃತಪಟ್ಟಿದರು. ಅವರ ಪತಿ ಕೃಷ್ಣ ಅವರು ಚೇತರಿಕೆ ಕಂಡಿದ್ದಾರೆ. ಈ ಹಿನ್ನೆಲೆ ಮುಖ್ಯವಾಗಿ ಕೃಷ್ಣಾ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ