/newsfirstlive-kannada/media/post_attachments/wp-content/uploads/2025/05/Rakesh-Poojary10.jpg)
'ಕಾಮಿಡಿ ಕಿಲಾಡಿಗಳು ಸೀಸನ್ -3' ವಿನ್ನರ್, ಕಿರುತೆರೆ ನಟ ರಾಕೇಶ್ ಪೂಜಾರಿ ಇನ್ನಿಲ್ಲ. ನಿನ್ನೆ ಸ್ನೇಹಿತರ ಮೆಹಂದಿ ಕಾರ್ಯಕ್ರಮದಲ್ಲಿ ನಟ ರಾಕೇಶ್ಗೆ ದಿಢೀರ್ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದಾರೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ರಾಕೇಶ್ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇದನ್ನೂ ಓದಿ: ಕನ್ನಡ ಕಿರುತೆರೆಯ ಖ್ಯಾತ ಕಲಾವಿದ ರಾಕೇಶ್ ಪೂಜಾರಿ ದುರಂತ ಅಂತ್ಯ; ಕಾರಣವೇನು?
ಇನ್ನೂ, ರಾಕೇಶ್ ಪೂಜಾರಿ ಸಾವಿಗೂ ಮುನ್ನ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿರೋ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋದಲ್ಲಿ ರಾಕೇಶ್ ಪೂಜಾರಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಒಂದು ಗುಂಪಿನಲ್ಲಿ ಡ್ಯಾನ್ಸ್ ಮಾಡುತ್ತಿದ್ದ ರಾಕೇಶ್ ಪೂಜಾರಿ ಅವರನ್ನು ಮೈಕ್ನಲ್ಲಿ ಮುಂದೆ ಬನ್ನಿ, ನಿಮಗೆ ಅಭಿಮಾನಿಗಳು ಜಾಸ್ತಿ ಇದ್ದಾರೆ ಅಂತ ಹೇಳಲಾಗಿದೆ. ಆ ಕೂಡಲೇ ಸ್ನೇಹಿತರು ಅವರನ್ನು ಮುಂದೆ ತಳ್ಳಿ ಡ್ಯಾನ್ಸ್ ಮಾಡುವಂತೆ ಹೇಳಿದ್ದಾರೆ.
View this post on Instagram
ಇದಾದ ಬಳಿಕ ಬಳಿಕ ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ರಾಕೇಶ್ ಪೂಜಾರಿ ಅಗಲಿದ್ದಾರೆ. ಸದ್ಯ ನಟನ ಮೃತದೇಹವನ್ನು ಕಾರ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮಲ್ಪೆ ಸಮೀಪದ ಹೂಡೆಯಲ್ಲಿರುವ ಸ್ವಗೃಹದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ರಾಕೇಶ್ ಅವರ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ