/newsfirstlive-kannada/media/post_attachments/wp-content/uploads/2025/03/rishab4.jpg)
ಮಂಗಳೂರು: ಕಾಂತಾರ ಕನ್ನಡ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರ. ಸ್ಯಾಂಡಲ್ವುಡ್ ನಟ ರಿಷಬ್ ಶೆಟ್ಟಿ ಅವರು ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ದೊಡ್ಡ ಹಿಟ್ ನೀಡಿತ್ತು. ಈ ಸಕ್ಸಸ್ ಬಳಿ ಕಾಂತಾರ 2 ಸಿನಿಮಾ ಮಾಡಲು ರಿಷಬ್ ಶೆಟ್ಟಿ ಮುಂದಾಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ.
ಇದನ್ನೂ ಓದಿ:SSLC ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್.. ಯಾವ್ಯಾವ ವಿಷಯ ಸೋರಿಕೆ ಆಗಿವೆ?
ಹೀಗಾಗಿ ರಿಷಬ್ ಶೆಟ್ಟಿ ಅವರು ಕಾಂತಾರ ಚಾಪ್ಟರ್ 1 ಶೂಟಿಂಗ್ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಇದೀಗ ಈ ಬ್ಯುಸಿ ಮಧ್ಯೆಯೂ ನಟ ರಿಷಬ್ ಶೆಟ್ಟಿ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ. ಕಾಂತಾರ ಚಾಪ್ಟರ್ 2 ಚಿತ್ರೀಕರಣ ಆಲ್ ಮೋಸ್ಟ್ ಮುಗಿದಿರುವ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನಕ್ಕೆ ಭೇಟಿ ದುರ್ಗಾಪರಮೇಶ್ವರಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದೇ ವೇಳೆ ಕಾಂತಾರ ಚಾಪ್ಟರ್ 2 ಚಿತ್ರೀಕರಣ ಬಗ್ಗೆ ಮಾತಾಡಿದ್ದಾರೆ. ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ಟೆಂಪಲ್ ರನ್ನ್ ಮಾಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿಂತನೆ ಮಾಡಲಾಗಿದೆ ಎಂದಿದ್ದಾರೆ. ಇನ್ನೂ, ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಡಿಕೆಶಿ ವಾರ್ನಿಂಗ್ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ ಅವರು, ನಾನು ಚಿತ್ರದ ಶೂಟಿಂಗ್ನಲ್ಲಿದ್ದೇನೆ. ಆ ಬಗ್ಗೆ ನನಗೆ ಗೊತ್ತಿಲ್ಲ ಅಂತ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ