/newsfirstlive-kannada/media/post_attachments/wp-content/uploads/2025/04/shivanna10.jpg)
ಪಹಲ್ಗಾಮ್‌ನಲ್ಲಿ ನಡೆದಿರುವ ಭಯಾನಕ ಭಯೋತ್ಪಾದಕ ದಾಳಿ ಕಂಡು ಇಡೀ ದೇಶವೇ ಕೆಂಡ ಕಾರುತ್ತಿದೆ. ಒಟ್ಟು 26 ಮಂದಿಯನ್ನು ಬಲಿ ಪಡೆದ ರಾಕ್ಷಸರ ವಿರುದ್ಧ ಸ್ಯಾಂಡಲ್ವುಡ್ ಸ್ಟಾರ್ ನಟರು ಕೂಡ ಉಗ್ರರ ನರಮೇಧದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ:ಪಾಕ್ಗೆ ಹೋದವರು ಮೇ 1ರೊಳಗೆ ಬರ್ಬೇಕು; ಭಾರತದಲ್ಲಿರೋ ಪಾಕಿಸ್ತಾನಿಯರಿಗೆ ತೊಲಗಲು ಡೆಡ್ಲೈನ್..!
ನಟ ಶಿವರಾಜ್ ಕುಮಾರ್ ಉಗ್ರರಿಗೆ ಶಿಕ್ಷೆ ಆಗಲಿ ಆಗ್ರಹಿಸಿದ್ದಾರೆ. ಅಲ್ಲದೇ ಮೂವರು ಕನ್ನಡಿಗರ ಸಾವಿಗೆ ಶಿವಣ್ಣ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಮಾತಾಡಿದ ಅವರು, ಯಾಕಿಷ್ಟು ಕೋಪ ಗೊತ್ತಿಲ್ಲ. ಮಾನವೀಯತೆ ತುಂಬಾ ಮುಖ್ಯ. ಯಾಕೆ ಈ ಮಟ್ಟಕ್ಕೆ ಹೋಗ್ತಿದೆ ಗೊತ್ತಿಲ್ಲ. ಸಾವಿನ ಸುದ್ದಿ ನಿಜಕ್ಕೂ ಬೇಸರ ತರಿಸಿತು. ಉಗ್ರಗಾಮಿಗಳಿಗೆ ಶಿಕ್ಷೆ ಆಗಲೇಬೇಕು ಎಂದಿದ್ದಾರೆ.
ಕಿಚ್ಚ ಸುದೀಪ್ ಅವರು ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಖಂಡನೆ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ಅಮಾಯಕರ ನೆತ್ತರು ಹರಿಸಲಾಗಿದೆ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ. ದೇಶದ ಶಕ್ತಿಯ ಮೇಲೆ ಮಾಡಲಾದ ದಾಳಿ. ಇದು ಸುಮ್ಮನಿರುವ ಸಮಯವಲ್ಲ. ಈ ಘಟನೆಗೆ ಪ್ರತಿಕ್ರಿಯೆ ಕೊಡಲೇಬೇಕು. ಈ ಹೀನ ಕೃತ್ಯದಲ್ಲಿ ಪಾಲ್ಗೊಂಡವರ ವಿರುದ್ಧ ತಕ್ಷಣ ಕ್ರಮ ವಹಿಸಿ ಅಂತಾ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ರಾಜನಾಥ್ ಸಿಂಗ್‌ಗೆ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.
ಭಾರತಾಂಬೆಯ ಕಳಶದಂತಿರುವ ಜಮ್ಮು ಮತ್ತು ಕಾಶ್ಮೀರ ಎಂದಿಗೂ ನಮ್ಮದೆ. ಪಹಲ್ಗಾಮ್‌ನಲ್ಲಿ ಉಗ್ರರು, ಅಮಾಯಕರ ಮೇಲೆ ನಡೆಸಿದಂತ ಕೃತ್ಯ ಎಂದಿಗೂ ಯಾರೂ ಕ್ಷಮಿಸಲಾಗದು. ಎಲ್ಲಾ ಧರ್ಮದ ಸಾರ ಪ್ರೀತಿ ಹಾಗೂ ಅಹಿಂಸೆ. ಪ್ರೀತಿಯಿಂದ ಸಾಧಿಸಲಾಗದ್ದು, ಹಿಂಸೆ ಹಾಗೂ ದ್ವೇಷದಿಂದ ಸಾಧಿಸಲು ಸಾಧ್ಯವೇ ಇಲ್ಲ. ಪ್ರಾಣ ಬಿಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ. ಕಳೆದುಕೊಂಡವರ ಕುಟುಂಬಗಳಿಗೆ ದೇವರು ಧೈರ್ಯ ಕರುಣಿಸಲಿ ಎಂದು ನಟ ಧ್ರುವ ಸರ್ಜಾ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಇನ್ನೂ ನಟ ಯಶ್ ಎಕ್ಸ್‌ನಲ್ಲಿ ಪಹಲ್ಗಾಮ್‌ನಲ್ಲಿ ಮುಗ್ಧ ಜನರ ಕ್ರೂರ ಹತ್ಯೆಯಿಂದ ತೀವ್ರ ದುಃಖವಾಗಿದೆ. ಮುಗ್ಧ ಜನರ ಮೇಲಿನ ದಾಳಿಯನ್ನು ಊಹಿಸಲು ಸಾಧ್ಯವಿಲ್ಲ. ಈ ಭೀಕರ ದುರಂತದಲ್ಲಿ ಸಂತ್ರಸ್ತರ ಕುಟುಂಬಗಳು ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಬರೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ