‘ನಾನು ದೂರು ನೀಡಿ 48 ಗಂಟೆ ಕಳೆದಿದರೂ ಬಂಧಿಸಿಲ್ಲ’
ಮತ್ತೆ ಪೊಲೀಸ್ ಠಾಣೆಗೆ ಬಂದ ಭೈರಪ್ಪ ಹರೀಶ್
ಫೇಸ್ಬುಕ್ ಲೈವ್ನಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನಟ
ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನಟ ಉಪೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಅವರನ್ನು ಈ ಕೂಡಲೇ ಬಂಧಿಸುವಂತೆ ಒತ್ತಡ ಹೆಚ್ಚಾಗಿದೆ. ನಾನು ದೂರು ನೀಡಿ 48 ಗಂಟೆಯಾದರೂ ಯಾಕೆ ಅವರನ್ನು ಇನ್ನೂ ಬಂಧಿಸಿಲ್ಲ ಎಂದು ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಆಗ್ರಹಿಸಿದ್ದಾರೆ.
ನಾನು ಆಗಸ್ಟ್ 13ರ ಸಂಜೆ ಉಪೇಂದ್ರ ವಿರುದ್ಧ ದೂರು ನೀಡಿದ್ದೆ. ಕೋರ್ಟ್ ಮೂಲಕ ಸ್ಟೇ ತಂದಿರುವುದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ವ್ಯಾಪ್ತಿಗೆ. ನಾನು ನೀಡಿರುವ ದೂರಿಗೆ ಯಾವುದೇ ಸ್ಟೇ ತಂದಿಲ್ಲ. ಹಲಸೂರು ಗೇಟ್ ಠಾಣೆಯಲ್ಲಿನ ಕೇಸ್ಗೆ ಸ್ಟೇ ಇಲ್ಲ. ಉಪೇಂದ್ರರನ್ನ ಯಾಕೆ ಬಂಧಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಅಲ್ಲದೇ ಹಲಸೂರು ಗೇಟ್ ಠಾಣೆಯ ಎಸಿಪಿಯನ್ನು ಭೇಟಿ ಮಾಡಿ ಕೂಡಲೇ, ಅವರ ಹೇಳಿಕೆ ಸಂಬಂಧ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು. ರಿಯಲ್ ಸ್ಟಾರ್, ನಟ ಉಪೇಂದ್ರ ಫೇಸ್ಬುಕ್ ಲೈವ್ನಲ್ಲಿ ದಲಿತ ಸಮುದಾಯದ ಕುರಿತ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದು ತೀವ್ರ ಸಂಚಲನ ಸೃಷ್ಟಿಸಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್