newsfirstkannada.com

“ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ”- ನಟ ಉಪೇಂದ್ರ

Share :

13-08-2023

    ನಟ ರಿಯಲ್ ಸ್ಟಾರ್ ಉಪೇಂದ್ರ ಮತ್ತೊಂದು ಟ್ವೀಟ್​​ ವೈರಲ್​

    ವರ್ಗದ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ?

    ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಂದ ದೂರು

ಬೆಂಗಳೂರು: ಪರಿಶಿಷ್ಟ ಜಾತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಟ ಉಪೇಂದ್ರ ತಮ್ಮ ಫೇಸ್​​​ಬುಕ್​ ಖಾತೆಯಲ್ಲಿ ಕ್ಷಮಾಪಣೆ ಕೋರಿದ್ದಾರೆ. ಇದಾದ ಬಳಿಕ ಮತ್ತೊಂದು ಟ್ವೀಟ್​​ ಮಾಡಿದ್ದಾರೆ.

ಇದನ್ನು ಓದಿ: ಪರಿಶಿಷ್ಟ ವರ್ಗದವರ ಬಗ್ಗೆ ಅವಹೇಳನಕಾರಿ ಪದ ಬಳಕೆ; ರಿಯಲ್ ಸ್ಟಾರ್ ಉಪೇಂದ್ರ ಮೇಲೆ FIR​ ದಾಖಲು

ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ ಎಂದ ಉಪ್ಪಿ..

ಇದೀಗ ತಮ್ಮ ಟ್ವೀಟರ್​ ಖಾತೆಯಲ್ಲಿ ಮತ್ತೊಂದು ಪೋಸ್ಟ್​​ ಹಾಕಿರುವ ಉಪೇಂದ್ರ ‘‘ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ನನಗೆ ಹುಚ್ಚೇ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ಧ್ವೇಷ ?’’ ಎಂದು ಬರೆದುಕೊಂಡಿದ್ದಾರೆ.

ಏನಿದು ಪ್ರಕರಣ..!

ನಟ ಉಪೇಂದ್ರ ಅವರು ಆನ್​ಲೈನ್​ ಕಾರ್ಯಕ್ರಮವೊಂದರಲ್ಲಿ ಪರಿಶಿಷ್ಟ ಜಾತಿಯವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ನಟ ಉಪೇಂದ್ರ ಅವರ ವಿರುದ್ಧ ಸಿಕೆ (ಚೆನ್ನಮ್ಮನ ಕೆರೆ) ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

“ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ”- ನಟ ಉಪೇಂದ್ರ

https://newsfirstlive.com/wp-content/uploads/2023/08/upendra-2.jpg

Load More