‘ನನ್ನ ಸೊಸೆ ಯಶ್​ಕ್ಕಿಂತ ಸಖತ್​ ಕಿಲಾಡಿ’.. ರಾಧಿಕಾ ಪಂಡಿತ್ ಬಗ್ಗೆ ಅತ್ತೆ ಪುಷ್ಪ ಏನಂದ್ರು ಗೊತ್ತಾ?

author-image
Veena Gangani
Updated On
‘ನನ್ನ ಸೊಸೆ ಯಶ್​ಕ್ಕಿಂತ ಸಖತ್​ ಕಿಲಾಡಿ’.. ರಾಧಿಕಾ ಪಂಡಿತ್ ಬಗ್ಗೆ ಅತ್ತೆ ಪುಷ್ಪ ಏನಂದ್ರು ಗೊತ್ತಾ?
Advertisment
  • ಸ್ಯಾಂಡಲ್‌ವುಡ್‌ಗೆ ನಿರ್ಮಾಪಕಿಯಾಗಿ ಯಶ್​ ತಾಯಿ ಪಾದಾರ್ಪಣೆ
  • ನಟ ಯಶ್ ತಂದೆ -ತಾಯಿಯಿಂದ ಹೊಸ ಪ್ರೊಡಕ್ಷನ್ ಆರಂಭ
  • ಮುದ್ದಾದ ಸೊಸೆ ರಾಧಿಕಾ ಬಗ್ಗೆ ಪುಷ್ಪ ಅರುಣ್ ಕುಮಾರ್ ಏನಂದ್ರು?

ರಾಕಿಂಗ್ ಸ್ಟಾರ್ ಯಶ್ ಅವರು ಭಾರತೀಯ ಸಿನಿಮಾ ಇಂಡಸ್ಟ್ರಿಯಲ್ಲೇ ಖ್ಯಾತ ನಟನಾಗಿ ಗುರುತಿಸಿಕೊಂಡಿದ್ದಾರೆ. ಯಶ್​ ಅವರು ಕೇವಲ ನಟ ಮಾತ್ರವಲ್ಲದೇ ನಿರ್ಮಾಪಕ ಕೂಡ ಹೌದು. ಬಾಲಿವುಡ್​ನ ರಾಮಾಯಣ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ:ಸೀತಾರಾಮ ತಂಡದಿಂದ ಬಿಗ್​ ಶಾಕ್​.. ವೀಕ್ಷಕರಿಗೆ ಗುಡ್​ ಬೈ ಹೇಳಲು ಮುಂದಾದ ಟಾಪ್ ಸೀರಿಯಲ್

ಇದೀಗ ನಟ ಯಶ್​ ಮಾತ್ರವಲ್ಲದೇ ಅವರ ಕುಟುಂಬದವರು ಕೂಡ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಳ್ಳಲಿದ್ದಾರೆ. ಹೌದು, ಯಶ್ ಅವರು ಈಗಾಗಲೇ ಒಂದು ಮಾನ್‌ಸ್ಟರ್ ಕ್ರಿಯೇಷನ್ಸ್ ಬ್ಯಾನರ್ ನಿರ್ಮಾಣ ಸಂಸ್ಥೆ ಹುಟ್ಟು ಹಾಕಿದ್ದಾರೆ. ಈ ಕಡೆ ಅವರ ತಾಯಿ ಪುಷ್ಪ ಅವರು ಕೂಡ ಪಿಎ ಪ್ರೊಡಕ್ಷನ್ಸ್ ಶುರು ಮಾಡಿದ್ದಾರೆ.

publive-image

ರಾಕಿಂಗ್ ಸ್ಟಾರ್ ಯಶ್ ತಾಯಿ ಕೊತ್ತಲವಾಡಿ ಸಿನಿಮಾ ನಿರ್ಮಿಸುವ ಮೂಲಕ ಸ್ಯಾಂಡಲ್‌ವುಡ್‌ಗೆ ನಿರ್ಮಾಪಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್‌ ವೇಳೆ ತನ್ನ ಸೊಸೆ ರಾಧಿಕಾ ಬಗ್ಗೆ ಮಾತನಾಡಿದ್ದಾರೆ. ಕಥೆ ಆಯ್ಕೆ ಮಾಡುವುದರಲ್ಲಿ ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ ಅಂತ ಪುಷ್ಪ ಅರುಣ್ ಕುಮಾರ್ ಹೇಳಿದ್ದಾರೆ. ಈ ಮಾತನ್ನು ಕೇಳಿಸಿಕೊಳ್ಳುತ್ತಿದ್ದಂತೆ ಎಲ್ಲರೂ ನಕ್ಕಿದ್ದಾರೆ.

ಈ ಬಗ್ಗೆ ಮಾತಾಡಿದ ಅವರು ಯಶ್​ ತಾಯಿ ಪುಷ್ಪ, ನನ್ನ ಮಗಳಾಗಲಿ ಅಥವಾ ಮಗನಿಗೂ ಈ ಬಗ್ಗೆ ಗೊತ್ತಿರಲಿಲ್ಲ. ನಾನು ಹೊಸದಾಗಿ ಚಿಕ್ಕ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ರಾಧಿಕಾ ತುಂಬಾ ಚೆನ್ನಾಗಿ ಕಥೆ ಸೆಲೆಕ್ಟ್ ಮಾಡುತ್ತಾಳೆ. ಕಥೆ ಆಯ್ಕೆ ಮಾಡೋದರಲ್ಲಿ ರಾಧಿಕಾ ಯಶ್‌ಗಿಂತಲೂ ಕಿಲಾಡಿ. ನನ್ನ ಸೊಸೆ ಆಗುವುದಕ್ಕೂ ಮೊದಲಿನಿಂದಲೂ ನಾನು ರಾಧಿಕಾಗೆ ಫ್ಯಾನ್. ಕಥೆ ವಿಚಾರದಲ್ಲಿ ತುಂಬಾ ಚೆನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾಳೆ. ಆ ವಿಚಾರದಲ್ಲಿ ನಾನು ಅವಳಿಂದ ಕಲಿಯಬೇಕಾಗಿರೋದು ತುಂಬಾ ಇದೆ ಎಂದು ಹೇಳಿದ್ದಾರೆ.

publive-image

ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಪಿಎ ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟಾಕಿದ್ದಾರೆ. ಅದರಂತೆ ಕೊತ್ತಲವಾಡಿ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರು ಆಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment