/newsfirstlive-kannada/media/post_attachments/wp-content/uploads/2025/06/yuva5.jpg)
ನಟ ಯುವರಾಜ್‌ಕುಮಾರ್ ನಟನೆಯ ಎಕ್ಕ ಸಿನಿಮಾದ ಹಾಡುಗಳು ಫುಲ್ ಟ್ರೆಂಡಿಂಗ್‌ನಲ್ಲಿವೆ. ಇತ್ತೀಚೆಗಷ್ಟೇ ಈ ಸಿನಿಮಾದ ಬ್ಯಾಂಗಲ್ ಬಂಗಾರಿ ಹಾಡು ರಿಲೀಸ್ ಆಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಈ ಹಾಡಿಗೆ ಎಲ್ಲರೂ ರೀಲ್ಸ್ ಮಾಡುತ್ತಿದ್ದಾರೆ.
ಇದನ್ನೂ ಓದಿ:ರೈತರಿಗೆ ಸಿಹಿ ಸುದ್ದಿ.. KRS ಡ್ಯಾಮ್ ತುಂಬಲು ಇನ್ನೂ ಎಷ್ಟು ಅಡಿ ನೀರು ಬೇಕು..?
/newsfirstlive-kannada/media/post_attachments/wp-content/uploads/2025/06/yuva3.jpg)
ಆದ್ರೆ, ಮೂರು ದಿನಗಳ ಹಿಂದೆ ನಟ ಯುವರಾಜ್‌ಕುಮಾರ್ ಸೇರಿದಂತೆ ಇಡೀ ಎಕ್ಕ ಚಿತ್ರತಂಡವು ತುಮಕೂರಿನ ಪ್ರಸಿದ್ಧ ಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿತ್ತು. ಈ ವೇಳೆ ಬೌನ್ಸರ್‌ಗಳಿದ್ದ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಮಹಿಳೆ ಕಾಲಿಗೆ ಗಂಭೀರ ಗಾಯವಾಗಿತ್ತು.
/newsfirstlive-kannada/media/post_attachments/wp-content/uploads/2025/06/yuva4.jpg)
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಟ ಯುವ, ಸಿನಿಮಾ ಪ್ರಚಾರದ ವೇಳೆ ಮಠಕ್ಕೆ ಎಕ್ಕ ಟೀಂ ಭೇಟಿ ಕೊಟ್ಟಿತ್ತು. ಜನಸಂದಣಿ ಹೆಚ್ಚಾಗಿದ್ದ ಕಾರಣ ತಳ್ಳಾಟ ನೂಕಾಟ ಆಗಿದೆ. ಈ ಘಟನೆಯಲ್ಲಿ ಮಹಿಳೆ ಕಾಲಿಗೆ ಪೆಟ್ಟು ಬಿದ್ದ ವಿಚಾರ ನನಗೆ ಗೊತ್ತಿರಲಿಲ್ಲ. ಬೆಂಗಳೂರಿಗೆ ವಾಪಸ್ ಆದಾಗ ಮಾಧ್ಯಮದಲ್ಲಿ ನೋಡಿದೆ. ಆನಂತರದಲ್ಲಿ ನಮ್ಮ ಅಭಿಮಾನಿಗಳ ಕಡೆಯಿಂದ ಮಹಿಳೆಗೆ ಎಲ್ಲಾ ಸೌಕರ್ಯ ಮಾಡಿಕೊಡಲಾಯ್ತು. ಬೌನ್ಸರ್ ತಳ್ಳಿದ್ದಾರೆ ಅನ್ನೋ ಮಾತು ಕೇಳಿ ಬಂದಿತ್ತು. ಈ ವಿಚಾರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us