newsfirstkannada.com

ಸ್ಟಾರ್​​ ನಟಿ ಜಯಪ್ರದಾಗೆ 6 ತಿಂಗಳು ಜೈಲು; ಕೋರ್ಟ್​​ನಿಂದ ಮಹತ್ವದ ಆದೇಶ

Share :

11-08-2023

    ಅದ್ಭುತ ನಟನೆ ಮೂಲಕ ಜನಮನ್ನಣೆ ಗಳಿಸಿದ್ದ ನಟಿ..!

    ಕೇಸ್​ವೊಂದರಲ್ಲಿ ನಟಿ ಜಯಪ್ರದಾಗೆ 6 ತಿಂಗಳು ಜೈಲು

    ಕಾರಣ ಕೇಳಿದ್ರೆ ಅಭಿಮಾನಿಗಳು ಪಕ್ಕಾ ಶಾಕ್​ ಆಗ್ತೀರಾ

ಚೆನ್ನೈ: ಬಹುಭಾಷಾ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈ ಎಗ್ಮೋರ್​​ ಕೋರ್ಟ್​ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಜತೆಗೆ 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ. ಆಸ್ತಿ ತೆರಿಗೆ ಪಾವತಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ನಟಿ ಜಯಪ್ರದಾ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸದ ಕಾರಣ ತನ್ನ ಎರಡು ಚಿತ್ರಮಂದಿರಗಳನ್ನು ಜಪ್ತಿ ಮಾಡಲಾಗಿತ್ತು. ಇದರೊಂದಿಗೆ ಕಾರ್ಮಿಕರ ಇಎಸ್​​ಐ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಕಾರ್ಮಿಕ ಇಲಾಖೆ ದೂರು ದಾಖಲಿಸಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್​​ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಏನಿದು ಕೇಸ್​​..?

ಚೆನ್ನೈನಲ್ಲಿ ಜಯಪ್ರದಾ ರಾಮ್​ ಕುಮಾರ್​ ಮತ್ತು ರಾಜ ಬಾಬು ಜೊತೆ ಸೇರಿಕೊಂಡು ಎರಡು ಚಿತ್ರಮಂದಿರಗಳನ್ನು ನಡೆಸುತ್ತಿದ್ದರು. ಈ ಚಿತ್ರಮಂದಿರಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಆಡಳಿತ ಮಂಡಳಿಯವರು ಇಎಸ್​ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ ಅದನ್ನು ಸರಿಯಾದ ಕ್ರಮದಲ್ಲಿ ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಜಯಪ್ರದಾ ಪಾವತಿಸುತ್ತಿರಲಿಲ್ಲ. ತಮ್ಮ ಪಾಲಿನ ಇಎಸ್​ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ನಟಿ ಜಯಪ್ರದಾ ವಿರುದ್ಧ ದೂರು ದಾಖಲಿಸಿದ್ದರು. ಇದೇ ಕೇಸ್​​ಗೆ ಸಂಬಂಧಿಸಿದಂತೆ ಚೆನ್ನೈ ಎಸ್ಕೋರ್ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ.

ನಟಿ ಜಯಪ್ರದಾ ಬಾಲಿವುಡ್ ಮತ್ತು ದಕ್ಷಿಣ ಭಾರತ ಚಿತ್ರರಂಗದಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು. ಕನ್ನಡದಲ್ಲೂ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಷ್ ಸೇರಿದಂತೆ ಅನೇಕ ಖ್ಯಾತ ನಟರ ಚಿತ್ರದಲ್ಲಿ ನಟಿಸಿದ್ದಾರೆ. ಹಬ್ಬ, ಈ ಬಂಧನ, ಸನಾದಿ ಅಪ್ಪಣ್ಣ, ಹುಲಿಯ ಹಾಲಿನ ಮೇವು, ಕವಿರತ್ನ ಕಾಳಿದಾಸ, ಶಬ್ದವೇದಿ ಮುಂತಾದ ಸೂಪರ್​ ಹಿಟ್​ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸ್ಟಾರ್​​ ನಟಿ ಜಯಪ್ರದಾಗೆ 6 ತಿಂಗಳು ಜೈಲು; ಕೋರ್ಟ್​​ನಿಂದ ಮಹತ್ವದ ಆದೇಶ

https://newsfirstlive.com/wp-content/uploads/2023/08/jaya-2.jpg

Load More