ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು ನಟಿಗೆ ಬ್ಲಾಕ್ ಮೇಲ್.. ಮಡೆನೂರು ಮನು ಮೇಲೆ ಸಾಲು ಸಾಲು ಆರೋಪ

author-image
Veena Gangani
Updated On
‘ಸರ್ಪ್ರೈಸ್ ಕೊಡ್ತೀನಿ ಕಣ್ಣು ಮುಚ್ಚಿಕೋ ಅಂದ, ಆಮೇಲೆ ನೋಡಿದ್ರೆ..’ ನಟ ಮನು ಬಗ್ಗೆ ಸಂತ್ರಸ್ತೆ ಮತ್ತಷ್ಟು ಆರೋಪ
Advertisment
  • ಸಂತ್ರಸ್ತೆಯನ್ನು ಮದುವೆ ಆಗೋದಾಗಿ ನಂಬಿಸಿದ್ದರಂತೆ ನಟ ಮಡೆನೂರು ಮನು
  • ಪ್ರಕರಣ ದಾಖಲಾಗುತ್ತಿದ್ದಂತೆ ನಟ ಮಡೆನೂರು ಮನು ಮೊಬೈಲ್ ಸ್ವಿಚ್ ಆಫ್
  • ಆರೋಪಿ ನಟನ ಪತ್ತೆಗಾಗಿ ಎರಡು ಪ್ರತ್ಯೇಕ ತಂಡ ರಚನೆ ಮಾಡಿದ ಪೊಲೀಸರು

ಕಾಮಿಡಿ ಕಿಲಾಡಿಗಳು ಸೀಸನ್​ 2ರ ವಿನ್ನರ್​, ಹಾಸ್ಯ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ಮೂಲಕ ನಟ ಮಡೆನೂರು ಮನು ಜನಪ್ರಿಯತೆ ಪಡೆದುಕೊಂಡಿದ್ದರು. ಅಲ್ಲದೇ ಕುಲದಲ್ಲಿ ಕೀಳ್ಯಾವುದೋ ಸಿನಿಮಾದಲ್ಲೂ ನಟಿಸಿದ್ದರು ನಟ ಮಡೆನೂರು ಮನು.

ಇದನ್ನೂ ಓದಿ:ಸೀತಾರಾಮ ತಂಡದಿಂದ ಬಿಗ್​ ಶಾಕ್​.. ವೀಕ್ಷಕರಿಗೆ ಗುಡ್​ ಬೈ ಹೇಳಲು ಮುಂದಾದ ಟಾಪ್ ಸೀರಿಯಲ್

publive-image

ಆದ್ರೆ ಕಿರುತೆರೆ ನಟಿ ಮಡೆನೂರು ಮನು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಅಂತ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಕಿರುತೆರೆ ನಟಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ.

publive-image

ಇನ್ನೂ, ಪೊಲೀಸರಿಗೆ ನೀಡಿದ ಎಫ್​ಐಆರ್​ನಲ್ಲಿ ಸಂತ್ರಸ್ತೆಯೂ ತನಗಾದ ಮೋಸವನ್ನು ಬಿಚ್ಚಿಟ್ಟಿದ್ದಾರೆ. ಸಂತ್ರಸ್ತೆ ಹಾಗೂ ಮನುಗೆ ಕಾಮಿಡಿ ಕಿಲಾಡಿ ಶೋನಲ್ಲಿ ಪರಿಚಯ ಆಗಿತ್ತಂತೆ. ಹೀಗೆ ಶಿಕಾರಿಪುರದ ಕಾರ್ಯಕ್ರಮವೊಂದಕ್ಕೆ ಮನು ಜೊತೆ ಹೋಗಿದ್ದಾಗ ಪೇಮೆಂಟ್ ಕೊಡುವ ನೆಪದಲ್ಲಿ ರೂಮಿಗೆ ತೆರಳಿ ಅತ್ಯಾಚಾರ ಎಸಗಿದ್ದಾರೆ. 2022ರ ಡಿಸೆಂಬರ್​ನಲ್ಲಿ ನಟಿಯ ಮನೆಗೆ ಹೋಗಿ ತಾಳಿ ಕಟ್ಟಿ ಅತ್ಯಾಚಾರ ಎಸಗಿದ್ದಾರೆ. ತನ್ನ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾರೆ. ನಾಯಕನಾಗಿರೋ ಸಿನಿಮಾಗೆ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದಾರೆ. ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ ಅಂತ ನಟಿ ಗಂಭೀರ ಆರೋಪ ಮಾಡಿದ್ದಾರೆ.

publive-image

ಹೀಗಾಗಿ ಸಂತ್ರಸ್ತೆ ನಟ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಿದ್ದಾರೆ. ಇನ್ನೂ ತನ್ನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗ್ತಿದ್ದಂತೆ ನಟ ಮಡೆನೂರು ಮನು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಆರೋಪಿ ನಟನ ಪತ್ತೆಗಾಗಿ ಪೊಲೀಸರು ಎರಡು ಪ್ರತ್ಯೇಕ ತಂಡ ರಚನೆ ಮಾಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತನಿಖೆ ಶುರುವಾಗಿದೆ. ಹೀಗಾಗಿ ಮಂಡ್ಯ ಹಾಗೂ ಹಾಸನದಲ್ಲಿ ನಟನ ಪತ್ತೆಗಾಗಿ ಪೊಲೀಸರು ಬಲೆ ಬಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment