/newsfirstlive-kannada/media/post_attachments/wp-content/uploads/2024/09/Nivedita-Gowda-Reels.jpg)
ಗಿಚ್ಚಿಗಿಲಿ, ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ನಿವೇದಿತಾ ಗೌಡ ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಚಂದನ್ ಶೆಟ್ಟಿಯಿಂದ ಡಿವೋರ್ಸ್ ಪಡೆದ ಮೇಲೆ ನಿವೇದಿತಾ ಗೌಡ ಅವರು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಇದೀಗ ಹೊಸ ರೀಲ್ಸ್ ವಿಡಿಯೋ ಪೋಸ್ಟ್ ಮಾಡಿರುವ ನಿವೇದಿತಾ ಅವರು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಗಾಯಕ ಚಂದನ್​ ಶೆಟ್ಟಿ ಮಾಜಿ ಪತ್ನಿ ನಿವೇದಿತಾ ಗೌಡ ದಿನೇ ದಿನೇ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಡಿವೋರ್ಸ್ ಪಡೆದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಹೊಸ ಹೊಸ ವಿಡಿಯೋ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ.
View this post on Instagram
ನಿವೇದಿತಾ ಗೌಡ ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹೊಸ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ವಿಡಿಯೋದಲ್ಲಿ ನಿವೇದಿತಾ ಅವರು ಸಖತ್ ಹಾಟ್​ಆಗಿ ಕಾಣಿಸಿಕೊಂಡಿದ್ದಾರೆ. ಕಿವಿ ಮೇಲೆ ಹೂ ಇಟ್ಟುಕೊಂಡು ಪೋಸ್ ಕೊಟ್ಟಿದ್ದಾರೆ. ನಿವ್ವಿ ಅವತಾರವನ್ನು ನೋಡಿದ ನೆಟ್ಟಿಗರು ಸಿಕ್ಕಾಪಟ್ಟೆ ತರಾಟೆ ತೆಗೆದುಕೊಂಡಿದ್ದಾರೆ. ಕೆಲವರಂತೂ ಕೆಟ್ಟ, ಕೆಟ್ಟ ಕಾಮೆಂಟ್‌ಗಳನ್ನೇ ಹಾಕುತ್ತಿದ್ದಾರೆ.
ಇದನ್ನೂ ಓದಿ: ನಿವೇದಿತಾ ಗೌಡ ಹೊಸ ಚಮತ್ಕಾರ.. ಅದು ಜಾಸ್ತಿ ಆಯ್ತು ಕಣಮ್ಮ ಅಂದಿದ್ದೇಕೆ ಫ್ಯಾನ್ಸ್​!
ಕನ್ನಡದ ಉರ್ಫಿ ಜಾವೆದ್ ಇವರೇ. ಬೋಲ್ಡ್ ಅಂಡ್ ಬ್ಯೂಟಿಫುಲ್ ಅಂತ ಕೆಲವರು ಕಾಮೆಂಟ್ ಮಾಡಿದ್ರೆ, ಇನ್ನೂ ಕೆಲವರು ಇವರನ್ನ ಅನ್ ಫಾಲೋ ಮಾಡಿ. ಜನಪ್ರಿಯತೆಗೋಸ್ಕರ ಹೀಗೆಲ್ಲಾ ರೀಲ್ಸ್ ಮಾಡ್ತಾರೆ ಕೂಡಲೇ ಅನ್ ಫಾಲೋ ಮಾಡಿ ಅಂತ ಸಲಹೆ ಕೊಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us