/newsfirstlive-kannada/media/post_attachments/wp-content/uploads/2025/07/RAMYA-VS-DARSHAN-FANS.jpg)
ಬೆಂಗಳೂರು: ನಟ ದರ್ಶನ್ ಅಭಿಮಾನಿಗಳ ವಿರುದ್ಧ ಸಮರ ಸಾರಿರುವ ನಟಿ ರಮ್ಯಾ, ಕಾನೂನಾತ್ಮಕವಾಗಿ ಪಾಠ ಕಲಿಸಲು ತೀರ್ಮಾನಿಸಿದ್ದಾರೆ. ಅಶ್ಲೀಲವಾಗಿ ನಿಂದಿಸುತ್ತಿರೋರ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಲು ನಟಿ ನಿರ್ಧರಿಸಿದ್ದಾರೆ.
ಅಂತೆಯೇ ಇಂದು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಟಿ ದೂರು ಸಲ್ಲಿಸಲು ಮುಂದಾಗಿದ್ದು, ರಮ್ಯಾ ಕೊಟ್ಟ ದೂರಿನ ಮೇಲೆ ಪೊಲೀಸರು ತನಿಖೆ ನಡೆಸಲಿದ್ದಾರೆ. ದೂರಿನ ಜೊತೆ ಕಾಮೆಂಟ್ಗಳ ಸ್ಕ್ರೀನ್ ಶಾಟ್ಸ್ ಕೂಡ ನೀಡಲಿದ್ದು, ಯಾರೆಲ್ಲ ಮೆಸೇಜ್ ಕಳುಹಿಸಿದ್ದಾರೆ ಅವರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ರಮ್ಯಾ vs ದರ್ಶನ್ ಫ್ಯಾನ್ಸ್
ರಾಜ್ಯದಲ್ಲಿ ರೇಣುಕಾಸ್ವಾಮಿ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ಈ ಹಿನ್ನೆಲೆಯಲ್ಲಿ ರಮ್ಯಾ ಕಳೆದ ಎರಡ್ಮೂರು ದಿನಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತಾ ಪೋಸ್ಟ್ ಮಾಡಿದ್ದರು. ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ರಮ್ಯಾರನ್ನು ನಿಂದಿಸಿ ಅಶ್ಲೀಲ ಸಂದೇಶ ಕಳುಸಿಲು ಶುರುಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಪ್ರೇಮಿಗಳಿಗೆ ಶುಭ, ಮನೆ, ಜಮೀನು ಮಾರುವವರಿಗೆ ಲಾಭ ಸಿಗುವ ದಿನ; ಇಲ್ಲಿದೆ ಇಂದಿನ ಭವಿಷ್ಯ
ದರ್ಶನ್ ಅಭಿಮಾನಿಗಳ ವರ್ತನೆ ಮಿತಿ ಮೀರುತ್ತಿದ್ದಂತೆಯೇ ನಟಿ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅಭಿಮಾನಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎನ್ನುವುದಕ್ಕೆ ನಿಮ್ಮ ಕಾಮೆಂಟ್ಸ್ ಆಧಾರ. ರೇಣುಕಾಸ್ವಾಮಿ ಕುಟುಂಬದ ಪರ ಧ್ವನಿ ಎತ್ತಿದ್ದಕ್ಕೆ ಅಶ್ಲೀಲ ಮೆಸೇಜ್ಗಳು ನನಗೆ ಬರುತ್ತಿವೆ ಎಂದು ಕೆಲವು ಸ್ಕ್ರೀನ್ಶಾಟ್ಗಳನ್ನು ಶೇರ್ ಮಾಡಿಕೊಂಡಿದ್ದರು. ಇದೀಗ ಅಶ್ಲೀಲ ಪದಗಳಿಂದ ನಿಂದಿಸುತ್ತಿರೋರ ವಿರುದ್ಧ ರಮ್ಯಾ ದೂರು ನೀಡಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ: Rain Alert: ರಾಜ್ಯದಲ್ಲಿ ಮತ್ತೆ ಮಳೆ.. ಮಳೆ.. 7 ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸುರಿಯುವ ಎಚ್ಚರಿಕೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ