ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಭಾವಿ ಸಚಿವರು; ಸ್ಫೋಟಕ ಮಾಹಿತಿ ಬಹಿರಂಗ!

author-image
admin
Updated On
ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಭಾವಿ ಸಚಿವರು; ಸ್ಫೋಟಕ ಮಾಹಿತಿ ಬಹಿರಂಗ!
Advertisment
  • ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸ್ಫೋಟಕ ತಿರುವು
  • ಕಾಂಗ್ರೆಸ್ ಸರ್ಕಾರದ ಪ್ರಭಾವಿ ರಾಜಕಾರಣಿಗೆ ಎದುರಾಗಿದೆ ಸಂಕಷ್ಟ
  • ರನ್ಯಾ ರಾವ್‌ ಪ್ರಕರಣದ ಹಿಂದೆ ಇರುವ ಪ್ರಭಾವಿ ಕೈಗಳ ಜಾಡು ಪತ್ತೆ?

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಬಂಧನ ಹಾಗೂ ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರನ್ಯಾ ರಾವ್‌ ಅವರನ್ನ ಬಂಧಿಸಿ DRI ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವಿಚಾರಣೆಯ ವೇಳೆ ಆರೋಪಿಯ ಈ ಕೃತ್ಯದ ಹಿಂದೆ ಹಲವು ಪ್ರಭಾವಿ ವ್ಯಕ್ತಿಗಳು ಇರುವ ಸುಳಿವು ಪತ್ತೆಯಾಗಿದೆ.

ಆರೋಪಿತೆ ನಟಿ ರನ್ಯಾ ರಾವ್‌ಗೆ ಹಲವು ರಾಜಕೀಯ ನಾಯಕರ ಜೊತೆ ಸಂಪರ್ಕ ಇದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರದ ಪ್ರಭಾವಿ ರಾಜಕಾರಣಿಯ ಹೆಸರು ಕೂಡ ಇದರಲ್ಲಿ ಕೇಳಿ ಬಂದಿದೆ. ಸಚಿವ ಹುದ್ದೆ ಅಲಂಕರಿಸಿರುವ ಆ ರಾಜಕಾರಣಿಗೂ ರನ್ಯಾ ರಾವ್ ಪ್ರಕರಣದಲ್ಲಿ ಸಂಕಷ್ಟ ಎದುರಾಗುವ ಭೀತಿ ಇದೆ.

publive-image

ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರಲ್ಲಿ ರನ್ಯಾ ರಾವ್ ಅದ್ಧೂರಿ ವಿವಾಹ ಮಹೋತ್ಸವ ನಡೆದಿತ್ತು. ಆ ಮದುವೆಯಲ್ಲಿ ಪ್ರಭಾವಿ ಸಚಿವರು ಭಾಗಿಯಾಗಿದ್ದರು. ಇದೀಗ ನಟಿ ರನ್ಯಾ ರಾವ್‌ ಬಂಧನವಾಗುತ್ತಿದ್ದಂತೆ ಆ ಸಚಿವರು ತಬ್ಬಿಬ್ಬಾಗಿದ್ದಾರೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಾಟ ಕೇಸ್​ಗೆ ಬಿಗ್ ಟ್ವಿಸ್ಟ್​ ಕೊಟ್ಟ ರನ್ಯಾ ರಾವ್.. ಅಸಲಿ ಕಳ್ಳರು ಯಾರು? 

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್ ಬಂಧನವಾಗುತ್ತಿದ್ದಂತೆ ಪ್ರಭಾವಿ ಸಚಿವರು ಈ ಕೇಸ್‌ ಅನ್ನು ಮ್ಯಾನೇಜ್ ಮಾಡಲು ತೆರೆಮರೆಯಲ್ಲಿ ಕಸರತ್ತು ಮಾಡಿದ್ದಾರೆ. ಆದರೆ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಈ ಕೇಸ್‌ ತನಿಖೆ ಮುಂದುವರಿಸಿದ್ದಾರೆ.

ರನ್ಯಾ ರಾವ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಡಿಆರ್‌ಐ ಅಧಿಕಾರಿಗಳು ಈ ಪ್ರಕರಣದ ಹಿಂದೆ ಇರುವ ಪ್ರಭಾವಿ ಕೈಗಳ ಜಾಡು ಪತ್ತೆ ಮಾಡುತ್ತಿದ್ದಾರೆ. ಒಂದು ವೇಳೆ ಮಹತ್ವದ ಸಾಕ್ಷಿಗಳು ಪತ್ತೆಯಾದ್ರೆ ಪ್ರಭಾವಿ ರಾಜಕಾರಣಿಯ ಸಚಿವ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment