ನಂಬಲು ಅಸಾಧ್ಯ, ಹೃದಯ ವಿದ್ರಾವಕ -ರಶ್ಮಿಕಾ ಮಂದಣ್ಣ ಆಕ್ರೋಶ

author-image
Veena Gangani
Updated On
ನಂಬಲು ಅಸಾಧ್ಯ, ಹೃದಯ ವಿದ್ರಾವಕ -ರಶ್ಮಿಕಾ ಮಂದಣ್ಣ ಆಕ್ರೋಶ
Advertisment
  • ಒಬ್ಬನೇ ವ್ಯಕ್ತಿಯ ಮೇಲೆ ಆರೋಪ ಹೊರಿಸುವುದು ಎಷ್ಟು ಸರಿ?
  • ಚಂಚಲಗೂಡ ಸೆಂಟ್ರಲ್ ಜೈಲಿನಿಂದ ರಿಲೀಸ್​ ಆದ ಸ್ಟಾರ್ ನಟ
  • ಸೋಷಿಯಲ್​ ಮೀಡಿಯಾದಲ್ಲಿ ನಟಿ ರಶ್ಮಿಕಾ ಮಂದಣ್ಣ ಆಕ್ರೋಶ

ನ್ಯಾಷನಲ್​ ಕ್ರಶ್​ ರಶ್ಮಿಕಾ ಮಂದಣ್ಣ ಸೋಷಿಯಲ್​ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಜೈಲು ಸೇರಿದರ ಬಗ್ಗೆ ನಟಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಇದನ್ನೂ ಓದಿ:ಅಲ್ಲು ಅರ್ಜುನ್ ಜೊತೆ ಪೊಲೀಸರು ಅನುಚಿತ ವರ್ತನೆ ಆರೋಪ; ಅಷ್ಟಕ್ಕೂ ಮನೆಯಲ್ಲಿ ಆಗಿದ್ದೇನು..?

publive-image

ನಟಿ ರಶ್ಮಿಕಾ ಮಂದಣ್ಣ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ನಾನು ಈಗ ನೋಡುತ್ತಿರುವುದನ್ನು ನಂಬಲಾಗುತ್ತಿಲ್ಲ. ನಡೆದ ಘಟನೆ ದುರದೃಷ್ಟಕರ ಮತ್ತು ಅತ್ಯಂತ ದುಃಖಕರ ಘಟನೆಯಾಗಿದೆ. ಆದರೆ, ಎಲ್ಲದಕ್ಕೂ ಒಬ್ಬನೇ ಒಬ್ಬ ವ್ಯಕ್ತಿಯ ಮೇಲೆ ಆರೋಪ ಹೊರಿಸುವುದನ್ನು ನೋಡಿದರೆ ಬೇಸರವಾಗುತ್ತದೆ. ಈ ಪರಿಸ್ಥಿತಿಯು ನಂಬಲಾಗದ ಮತ್ತು ಹೃದಯವಿದ್ರಾವಕವಾಗಿದೆ ಎಂದು ಬರೆದುಕೊಂಡಿದ್ದಾರೆ.


">December 13, 2024

publive-image

ಸದ್ಯ ಇಂದು ಬೆಳಗ್ಗೆ ನಟ ಅಲ್ಲು ಅರ್ಜುನ್​ ಚಂಚಲಗೂಡ ಸೆಂಟ್ರಲ್ ಜೈಲಿನಿಂದ ಆಗಿದ್ದಾರೆ. ಇದೇ ವಿಚಾರ ತಿಳಿದ ಕೂಡಲೇ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಫುಲ್​ ಖುಷ್ ಆಗಿದ್ದಾರೆ. ಜೊತೆಗೆ ಟಾಲಿವುಟ್​ ನಟ ನಟಿಯರು ಕೂಡ ಹರ್ಷವನ್ನು ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 4ರಂದು ಅಲ್ಲು ಅರ್ಜುನ್ ಅವರು ಪುಷ್ಪ 2 ಪ್ರೀಮಿಯರ್‌ಗಾಗಿ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ಗೆ ಭೇಟಿ ನೀಡಿದ್ದರು. ಥಿಯೇಟರ್‌ನಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ಕಾಲ್ತುಳಿತಕ್ಕೆ ಕಾರಣವಾಯಿತು. ಕಾಲ್ತುಳಿತದಿಂದಾಗಿ ಮಹಿಳೆಯೊಬ್ಬರು ಜೀವ ಕಳೆದುಕೊಂಡಿದ್ದರು ಮತ್ತು ಅವರ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ನಂತರ ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಸಂಧ್ಯಾ ಥಿಯೇಟರ್ ಆಡಳಿತದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment