newsfirstkannada.com

ಡೀಪ್​ ಫೇಕ್​ ವಿಡಿಯೋ ಶೇರ್​ ಮಾಡಿದ್ದ ಆರೋಪಿ ಅರೆಸ್ಟ್​.. ಈ ಬಗ್ಗೆ ರಶ್ಮಿಕಾ ಮಂದಣ್ಣ ಏನಂದ್ರು?

Share :

Published January 21, 2024 at 6:44pm

  ದೆಹಲಿ ಪೊಲೀಸರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದ ರಶ್ಮಿಕಾ

  ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನಿವಾಸಿಯಾದ ಆರೋಪಿ

  ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ಆರೋಪಿ ಸಿಕ್ಕಿದ್ದು ಹೇಗೆ?

ನ್ಯಾಷನಲ್ ಕ್ರಶ್, ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಈ ಡೀಪ್ ಫೇಕ್‌ ಕೇಸ್ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಕೊನೆಗೂ ಈ ಪ್ರಕರಣವನ್ನು ದೆಹಲಿ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದ ಕೇಸ್​ಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇಮಾನಿ ನವೀನ್ (24) ಬಂಧಿತ ಆರೋಪಿ.

ಇದನ್ನು ಓದಿ: ರಶ್ಮಿಕಾ ಮಂದಣ್ಣ ಡೀಪ್‌ ಫೇಕ್‌ ವಿಡಿಯೋ ವೈರಲ್ ಮಾಡಿದ್ದು ಯಾಕೆ? ಸ್ಫೋಟಕ ಸಂಗತಿ ಬಾಯ್ಬಿಟ್ಟ ಆರೋಪಿ!

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್​ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ ನಟಿ ರಶ್ಮಿಕಾ ಮಂದಣ್ಣ ದೆಹಲಿ ಪೊಲೀಸರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಕೃತ್ಯ ಎಸಗಿದವರನ್ನು ಬಂಧಿಸಿದ್ದಕ್ಕಾಗಿ ಧನ್ಯವಾದಗಳು. ಹುಡುಗರೇ- ನಿಮ್ಮ ಒಪ್ಪಿಗೆಯಿಲ್ಲದೇ ನಿಮ್ಮ ಚಿತ್ರವನ್ನು ಎಲ್ಲಿಯಾದರೂ ಬಳಸಿದರೆ ಅಥವಾ ಮಾರ್ಫ್ ಮಾಡಿದ್ದರೆ ಅದು ತಪ್ಪು. ನಿಮ್ಮನ್ನು ಬೆಂಬಲಿಸುವ ಜನರಿಂದ ನೀವು ಸುತ್ತುವರೆದಿರುವಿರಿ. ಹೀಗೆ ಮಾಡಿದ್ರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಇದು ನೆನಪಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ದೆಹಲಿ ಪೊಲೀಸರು ಆಂಧ್ರಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಯೂ ರಶ್ಮಿಕಾ ಮಂದಣ್ಣ ಫ್ಯಾನ್ ಪೇಜ್ ಅಡ್ಮಿನ್ ಆಗಿದ್ದನಂತೆ. ಇದೇ ರೀತಿ ಇನ್ನಿಬ್ಬರು ಸೆಲಿಬ್ರೆಟಿಗಳ ಫ್ಯಾನ್ ಪೇಜ್ ಕ್ರಿಯೇಟ್ ಮಾಡಿದ್ದನಂತೆ. ಈ ಆರೋಪಿ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಡೀಪ್ ಫೇಕ್ ವಿಡಿಯೋ ಸೃಷ್ಟಿ ಮಾಡಿದ್ದಾನಂತೆ. ಇಮಾನಿ ನವೀನ್ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನಿವಾಸಿಯಾಗಿದ್ದಾನೆ. ಸದ್ಯ ಆರೋಪಿ ಬಳಿಯಿದ್ದ ಲ್ಯಾಪ್ ಟಾಪ್ ಹಾಗೂ ಮೊಬೈಲ್​ನನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ತೀವ್ರ ತನಿಖೆ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡೀಪ್​ ಫೇಕ್​ ವಿಡಿಯೋ ಶೇರ್​ ಮಾಡಿದ್ದ ಆರೋಪಿ ಅರೆಸ್ಟ್​.. ಈ ಬಗ್ಗೆ ರಶ್ಮಿಕಾ ಮಂದಣ್ಣ ಏನಂದ್ರು?

https://newsfirstlive.com/wp-content/uploads/2024/01/rashmika-11.jpg

Load More