/newsfirstlive-kannada/media/post_attachments/wp-content/uploads/2025/07/sarojadedvi.jpg)
ಖ್ಯಾತ ಬಹುಭಾಷಾ ನಟಿ, ಹಿರಿಯ ಕಲಾವಿದೆ ಸರೋಜಾದೇವಿ ಅವರು ನಿಧನರಾಗಿದ್ದಾರೆ. ಕನ್ನಡ ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳಲ್ಲಿಯೂ ನಾಯಕಿಯಾಗಿ ಮೆರೆದಿದ್ದ ಸರೋಜಾದೇವಿ ಅವರು ವಯೋಸಹಜ ಕಾಯಿಲೆಯಿಂದ 87 ವರ್ಷಕ್ಕೆ ವಿಧಿವಶರಾಗಿದ್ದಾರೆ.
ಇದನ್ನೂ ಓದಿ: ಬಿ.ಸರೋಜಾ ದೇವಿ ಇನ್ನು ನೆನಪು ಮಾತ್ರ; ಮಹಾನ್ ನಟಿಯ ಅಪರೂಪದ ಫೋಟೋಗಳು..!
ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ನಟಿಸಿದ್ದರು. 1938ರ ಜನವರಿ 7 ರಂದು ಬೆಂಗಳೂರಿನಲ್ಲಿ ಜನಿಸಿದ ಬಿ ಸರೋಜಾದೇವಿ ಅಂದಿನ ಕಾಲದಲ್ಲೇ ಮೊದಲ ಲೇಡಿ ಸೂಪರ್‌ಸ್ಟಾರ್ ಆಗಿದ್ದವರು. 1962ರಲ್ಲಿ ಪ್ರಸಾರವಾದ ‘ಕಿತ್ತೂರ ರಾಣಿ ಚೆನ್ನಮ್ಮ’ ಸಿನಿಮಾದಲ್ಲಿ ಬಿ ಸರೋಜಾದೇವಿ ಅವರು ನಟಿಸಿದ್ದರು.
ಸರೋಜಾ ದೇವಿ ಅವರು ಅಮರ ಶಿಲ್ಪಿ ಜಕಣಾಚಾರಿ, ಭಾಗ್ಯವಂತರು, ಮಲ್ಲಮ್ಮನ ಪವಾಡ, ಬಬ್ರುವಾಹನ, ಲಕ್ಷ್ಮೀಸರಸ್ವತಿ, ಕಥಾಸಂಗಮ, ಶ್ರೀ ಕೃಷ್ಣ ರುಕ್ಮಿಣಿ ಸತ್ಯಭಾಮಾ ಮುಂತಾದ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು. ತಮಿಳಿನ ಪಾಟ್ಟಾಲಿ ಮುತ್ತು, ಕಲ್ಯಾಣ ಪರಿಸು, ಪಡಿಕಥ ಮೇಥೈ, ತೆಲುಗಿನ ಪಂಡರಿ ಭಕ್ತಲು, ದಕ್ಷಯಜ್ಞಂ, ಮೆಹಂದಿ ಲಗ ಕೆ ರಖನಾ, ಹಿಂದಿಯ ಆಶಾ, ಮಲೆಯಾಳಂನ ಮುತ್ತುಮಿಂತ್ರೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿನ ಸಾಧನೆಗಾಗಿ ಸರೋಜಾದೇವಿಗೆ 2009ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಫಿಲ್ಮ್‌ಫೇರ್ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿಗಳು ಸಿಕ್ಕಿವೆ. ಇನ್ನೂ, ನಟ ಪುನೀತ್ ರಾಜ್​ಕುಮಾರ್​ ಜೊತೆಗೆ ನಟಿ ಬಿ ಸರೋಜಾದೇವಿ ಯಾರಿವನು ಹಾಗೂ 2019ರಲ್ಲಿ ತೆರೆಕಂಡ ನಟ ಸಾರ್ವಭೌಮ ಸಿನಿಮಾದಲ್ಲಿ ಕೊನೆಯದಾಗಿ ನಟಿಸಿದ್ದರು. ಇದೇ ಇವರ ಕೊನೆಯ ಸಿನಿಮಾವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ