‘ಆರ್ಟಿಕಲ್ 370’ ಸಿನಿಮಾದ ಟ್ರೈಲರ್ ಲಾಂಚ್ ವೇಳೆ ಕೊಟ್ಟ ಸಿಹಿಸುದ್ದಿ
3 ವರ್ಷಗಳ ಬಳಿಕ ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಯಾಮಿ
2021ರಲ್ಲಿ ಆದಿತ್ಯ ಧಾರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ
ಬಹುಭಾಷಾ ನಟಿ ಯಾಮಿ ಗೌತಮ್ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ವೊಂದನ್ನು ಕೊಟ್ಟಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅವರ ಜೊತೆ ಉಲ್ಲಾಸ ಉತ್ಸಾಹ ಸಿನಿಮಾದಲ್ಲಿ ನಟಿಸಿದ್ದ ನಟಿ ಯಾಮಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮದುವೆಯಾಗಿ 3 ವರ್ಷಗಳ ಬಳಿಕ ನಟಿ ಯಾಮಿ ಹಾಗೂ ಆದಿತ್ಯ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಈ ವಿಚಾರ ಗೊತ್ತಾಗುತ್ತಿದ್ದಂತೆ ಈ ಜೋಡಿಗೆ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ. ಇನ್ನು, ಫೆಬ್ರವರಿ 23ರಂದು ರಿಲೀಸ್ಗೆ ರೆಡಿಯಾಗಿರೋ ‘ಆರ್ಟಿಕಲ್ 370’ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ನಿರ್ದೇಶಕ ಆದಿತ್ಯ ಧಾರ್- ಯಾಮಿ ಜೋಡಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರ ತಿಳಿಸಿದ್ದಾರೆ. ಯಾಮಿ ಐದೂವರೆ ತಿಂಗಳ ಗರ್ಭಿಣಿ ಎಂದು ತಿಳಿಸಿದ್ದಾರೆ. ಸದ್ಯ ಸುದ್ದಿ ಕೇಳಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
2019ರಲ್ಲಿ ‘ಉರಿ’ ಸಿನಿಮಾ ವೇಳೆ ನಿರ್ದೇಶಕ ಆದಿತ್ಯಾ ಧಾರ್ ಮತ್ತು ಯಾಮಿ ಪರಿಚಯವಾಯ್ತು. 2021ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಯಾಮಿ ಹಾಗೂ ಆದಿತ್ಯ ಧಾರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಹೊಸ ಅತಿಥಿಯ ಆಗಮನದ ಖುಷಿಯಲ್ಲಿದ್ದಾರೆ ಯಾಮಿ ದಂಪತಿ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ