/newsfirstlive-kannada/media/post_attachments/wp-content/uploads/2025/06/ram-charan.jpg)
ತೆಲುಗು ನಟ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರೋ ‘ದಿ ಇಂಡಿಯನ್ ಹೌಸ್’ ಸಿನಿಮಾ ಸೆಟ್‌ನಲ್ಲಿ ಅವಘಡ ಸಂಭವಿಸಿದೆ.
ಇದನ್ನೂ ಓದಿ: ಅಣ್ಣಾವ್ರ ಮನೆಯಲ್ಲಿ ಅಮೃತಾಧಾರೆ ಸೀರಿಯಲ್​ ನಟ ರಾಜೇಶ್​ ನಟರಂಗ್; ಏನಾದ್ರೂ ವಿಶೇಷ ಉಂಟಾ?
ಸಿನಿಮಾ ಸೆಟ್​ನಲ್ಲಿ ಏಕಾಏಕಿ ದೊಡ್ಡ ಟ್ಯಾಂಕರ್ ಒಡೆದು ಹೋಗಿದೆ. ಪರಿಣಾಮ ಭಾರೀ ಪ್ರಮಾಣದ ನೀರು ಸೋರಿ, ಸಹಾಯಕ ಕ್ಯಾಮೆರಾಮನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ ಸೆಟ್‌ನಲ್ಲಿ ವಸ್ತುಗಳಿಗೆ ಹಾನಿಯಾಗಿದೆ. ಅಲ್ಲದೇ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
View this post on Instagram
ಹೈದರಾಬಾದ್​ನ ಶಂಶಾಬಾದ್​ನಲ್ಲಿ ‘ದಿ ಇಂಡಿಯನ್ ಹೌಸ್’ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ನಟ ನಿಖಿಲ್ ಕೂಡ ಸೆಟ್​ನಲ್ಲಿ ಇದ್ದರು. ಆದರೆ ನಟನಿಗೆ ಯಾವುದೇ ತೊಂದರೆ ಆಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಚಿತ್ರವನ್ನು ಅಭಿಷೇಕ್ ಅಗರ್​ವಾಲ್ ಹಾಗೂ ತೇಜ್ ನಾರಾಯಣ್ ಅಗರ್​ವಾಲ್ ನಿರ್ಮಾಣ ಮಾಡಿದ್ದಾರೆ. ನಿರ್ಮಾಣದಲ್ಲಿ ರಾಮ್ ಚರಣ್ ಕೂಡ ಕೈ ಜೋಡಿಸಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us