ತಮ್ಮ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಧೈರ್ಯ ನೀಡಿದ ADGP
ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಅವರು ಒಬ್ಬ ಆರೋಪಿ ಆಗಿದ್ದಾನೆ
ಪತ್ರದಲ್ಲಿ ಜಾರ್ಜ್ ಬರ್ನಾರ್ಡ್ ಷಾ ಅವರ ಪ್ರಸಿದ್ಧ ವಾಕ್ಯ ಉಲ್ಲೇಖ
ತಮ್ಮ ಮೇಲೆ ಮಾಡಿದ್ದ ಆರೋಪಕ್ಕೆ ಪರೋಕ್ಷವಾಗಿ ಎಡಿಜಿಪಿ ಚಂದ್ರಶೇಖರ್ ಟಾಂಗ್ ನೀಡಿದ್ದಾರೆ. ತಮ್ಮ ಸಿಬ್ಬಂದಿಗೆ ಸ್ಪಷ್ಟನೆ ನೀಡುವ ನೆಪದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಕೌಂಟರ್ ಅಟ್ಯಾಕ್ ಮಾಡಿದ್ದಾರೆ. ಹಾಗಾದ್ರೆ ಹೆಚ್ಡಿಕೆ ಆರೋಪಕ್ಕೆ ಎಡಿಜಿಪಿ ಏನೆಂದು ಕೌಂಟರ್ ಕೊಟ್ಟಿದ್ದಾರೆ ಅನ್ನೋ ವಿವರ ಹೀಗಿದೆ.
ಹೆಚ್ಡಿಕೆ ಆರೋಪಕ್ಕೆ ADGP ಚಂದ್ರಶೇಖರ್ ಕೌಂಟರ್
ಮುಡಾ ಹಗರಣದ ಬಳಿಕ ರಾಜ್ಯ ರಾಜಕಾರಣದಲ್ಲಿ ಸೇಡಿನ ರಾಜಕಾರಣ ಶುರುವಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೇಂದ್ರ ಸಚಿವ ಕುಮಾರಸ್ವಾಮಿಗೂ ಲೋಕಾ ಕಂಟಕ ಎದುರಾಗಿದೆ. ಗಂಗೇನಹಳ್ಳಿ ಡಿ-ನೋಟಿಪಿಕೇಷನ್ ಪ್ರಕರಣ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ರು. ಇದರ ಬೆನ್ನಲ್ಲೇ ಕೆರಳಿದ ಕೇಂದ್ರ ಸಚಿವ ಕುಮಾರಸ್ವಾಮಿ, ನಿನ್ನೆ ಸುದ್ದಿಗೋಷ್ಠಿ ನಡೆಸಿ, ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದರು. ಬೆನ್ನಲ್ಲೇ ತಮ್ಮ ಇಲಾಖೆಯ ಸಿಬ್ಬಂದಿಗೆ ಪತ್ರ ಬರೆಯುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಭರ್ಜರಿ ಟಾಂಗ್ ನೀಡಿದ್ದಾರೆ.
ಇದನ್ನೂ ಓದಿ: ಮುಡಾ ಕೇಸ್; ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ್ಯಾವ IPC ಸೆಕ್ಷನ್ ಏನ್ ಹೇಳುತ್ತೆ?
₹20 ಕೋಟಿ ಡಿಮ್ಯಾಂಡ್ ಆರೋಪಕ್ಕೆ ಚಂದ್ರಶೇಖರ್ ಕೌಂಟರ್
ಕುಮಾರಸ್ವಾಮಿ ಆರೋಪಕ್ಕೆ ಕೌಂಟರ್ ನೀಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್, ಪತ್ರದ ಮೂಲಕ ತಮ್ಮ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಧೈರ್ಯ ನೀಡಿದ್ದಾರೆ. ಹಾಗೂ ಹೆಚ್.ಡಿ ಕುಮಾರಸ್ವಾಮಿ ಆರೋಪಕ್ಕೆ ಕೌಂಟರ್ ಕೂಡ ನೀಡಿದ್ದಾರೆ
ಹೆಚ್ಡಿಕೆ ಆರೋಪಕ್ಕೆ ಕೌಂಟರ್
ಪ್ರಕರಣ ಒಂದರ ಆರೋಪಿ ಎಂದು ಪತ್ರ ಪ್ರಾರಂಭಿಸಿರುವ ಚಂದ್ರಶೇಖರ್ ನನ್ನ ಮೇಲೆ ಹೆಚ್ಡಿಕೆ ಸುಳ್ಳು ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ. ಎಸ್ಐಟಿ ಸಕ್ಷಮ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್ ಮಂಜೂರಾತಿ ಕೋರಿದೆ. ಆರೋಪಿ ಹೆಚ್ ಡಿ ಕುಮಾರಸ್ವಾಮಿ ಜಾಮೀನು ಪಡೆದಿದ್ದಾರೆ. ನಮ್ಮನ್ನ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ. ನಮ್ಮಲ್ಲಿ ಭಯ ಹುಟ್ಟಿಸುವ ಉದ್ದೇಶ ಹೊಂದಿದ್ದಾರೆ. ಅವರು ಎಷ್ಟೇ ಉನ್ನತ ಸ್ಥಾನದಲ್ಲಿದ್ರು ಆತನೊಬ್ಬ ಆರೋಪಿಯಾಗಿದ್ದಾನೆ. ಇಂತಹ ಆರೋಪ ಮತ್ತು ಬೆದರಿಕೆಗಳಿಂದ ನಾವು ನಿರಾಶೆಗೊಳ್ಳಬಾರದು. ಎಸ್‌ಐಟಿ ಮುಖ್ಯಸ್ಥನಾಗಿ ನಾನು ಭಯವಿಲ್ಲದೆ ಕೆಲಸ ಮಾಡುತ್ತೇನೆ. ಪ್ರಕರಣದ ಸತ್ಯಾಸತ್ಯತೆ ಹೊರಗೆ ತರುತ್ತೇನೆ. ಎಲ್ಲಾ ಬಾಹ್ಯ ಪ್ರಭಾವದಿಂದ ನಿಮ್ಮನ್ನ ರಕ್ಷಿಸುತ್ತೇನೆ ಎಂದು ಎಸ್ಐಟಿ ಅಧಿಕಾರಿ ಸಿಬ್ಬಂದಿಗಳಿಗೆ ಪತ್ರ ಬರೆಯುವ ಮೂಲಕ ಚಂದ್ರಶೇಖರ್ ಭರವಸೆ ನೀಡಿದ್ದಾರೆ.
ಸಚಿವರನ್ನ ಪರೋಕ್ಷವಾಗಿ ಹಂದಿಗೆ ಹೋಲಿಸಿದ್ರಾ?
ಸಿಬ್ಬಂದಿಗೆ ಬರೆದ ಪತ್ರದಲ್ಲಿ ಜಾರ್ಜ್ ಬರ್ನಾರ್ಡ್ ಷಾ ಅವರ ಪ್ರಸಿದ್ಧ ಇಂಗ್ಲಿಷ್ ವಾಕ್ಯವನ್ನ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.
‘ಸತ್ಯಮೇವ ಜಯತೆ’
ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ. ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ. ಆದರೆ ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸುತ್ತೇವೆ. ಅಪರಾಧಿಗಳನ್ನು, ಆರೋಪಿಗಳನ್ನು ಎದುರಿಸುವುದನ್ನು ನಾವು ತಪ್ಪಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ನಾವು ಎದುರಿಸುವ ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ನಮ್ಮನ್ನು ತಡೆಯಬಾರದು. ಭರವಸೆಯನ್ನು ಕಳೆದುಕೊಳ್ಳಬೇಡಿ. ಯಾವಾಗಲೂ ಸತ್ಯಕ್ಕೆ ಜಯ ಸಿಗುತ್ತೆ. ಸತ್ಯ, ದೇವರು ಮತ್ತು ನಮ್ಮ ಕಾನೂನಿನಲ್ಲಿ ನಂಬಿಕೆ ಇರಲಿ. ಸತ್ಯಮೇವ ಜಯತೆ ಎಂದು ಪತ್ರದಲ್ಲಿ ಎಡಿಜಿಪಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: RRR ಬಳಿಕ ದೇವರದಲ್ಲಿ ಜೂನಿಯರ್ NTR ಅಬ್ಬರ.. ಸಿನಿಮಾ ರಿವ್ಯೂ ಏನ್ ಹೇಳುತ್ತೆ?
ಹೆಚ್ಡಿಕೆ ವಿರುದ್ಧ ಪ್ರಾಸಿಕ್ಯೂಷನ್ಗೆ ಮಂಜೂರಾತಿ ಕೋರಿದ್ದ ಅಧಿಕಾರಿ ವಿರುದ್ಧ ಇದೀಗ ಗಂಭೀರ ಆರೋಪ ಕೇಳಿ ಬಂದಿದೆ. ಇದಕ್ಕೆ ಎಡಿಜಿಪಿ ಕೂಡ ಕೌಂಟರ್ ನೀಡಿದ್ದಾರೆ. ಹಂದಿ ಕೊಳಕು ಅಂತಲೇ ಪರೋಕ್ಷವಾಗಿ ಹೆಚ್ಡಿಕೆ ವಿರುದ್ಧ ಚಂದ್ರಶೇಖರ್ ಅಟ್ಯಾಕ್ ಮಾಡಿದ್ದು, ಇದಕ್ಕೆ ದಳಪತಿ ಯಾವ ಉತ್ತರ ಕೊಡುತ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ