5 ಮರಿಗಳಿಗೆ ಜನ್ಮ ನೀಡಿದ ಆಫ್ರಿಕಾದ ಗಾಮಿನಿ.. ಭಾರತದಲ್ಲಿ ಚೀತಾಗಳ ಸಂಖ್ಯೆ ಈಗ ಎಷ್ಟು?

author-image
admin
Updated On
5 ಮರಿಗಳಿಗೆ ಜನ್ಮ ನೀಡಿದ ಆಫ್ರಿಕಾದ ಗಾಮಿನಿ.. ಭಾರತದಲ್ಲಿ ಚೀತಾಗಳ ಸಂಖ್ಯೆ ಈಗ ಎಷ್ಟು?
Advertisment
  • ಪ್ರಾಜೆಕ್ಟ್ ಚೀತಾ ಯೋಜನೆಯಡಿ ದಕ್ಷಿಣ ಆಫ್ರಿಕಾದಿಂದ ಬಂದ ಗಾಮಿನಿ
  • 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ 8 ಚೀತಾ ಅರಣ್ಯಕ್ಕೆ
  • ಭಾರತದ ನೆಲದಲ್ಲಿ ಜನ್ಮ ಪಡೆದ ಚೀತಾಗಳ ಸಂಖ್ಯೆ ಈಗ 13ಕ್ಕೆ ಏರಿಕೆ

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ ಚೀತಾಗಳ ಬೆಳವಣಿಗೆ ಉತ್ತಮವಾಗಿದ್ದು, ಕುನೋ ನ್ಯಾಷನಲ್‌ ಪಾರ್ಕ್‌ನಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. 5 ವರ್ಷದ ಗಾಮಿನಿ ಎಂದ ಆಫ್ರಿಕಾ ಚೀತಾ 5 ಮರಿಗಳಿಗೆ ಜನ್ಮ ನೀಡಿದ್ದು ಸಂಭ್ರಮಕ್ಕೆ ಕಾರಣವಾಗಿದೆ.

ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಈ ಸಿಹಿಸುದ್ದಿಯನ್ನ ವಿಡಿಯೋ ಸಮೇತ ತಮ್ಮ ಸೋಷಿಯಲ್ ಮೀಡಿಯಾ Xನಲ್ಲಿ ಹಂಚಿಕೊಂಡಿದ್ದಾರೆ. ಗಾಮಿನಿ 5 ಮರಿಗಳಿಗೆ ಜನ್ಮ ನೀಡುವುದರೊಂದಿಗೆ ಭಾರತದಲ್ಲಿ ಹುಟ್ಟಿದ ಚೀತಾಗಳ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಈ ಸಂಭ್ರಮದ ಸಮಯದಲ್ಲಿ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳಿಗೆ ಶುಭಾಶಯ ಕೋರಿದ್ದಾರೆ.

ಭಾರತಕ್ಕೆ ಬಂದ ಚೀತಾಗಳಲ್ಲಿ ಮರಿಗಳಿಗೆ ಜನ್ಮ ನೀಡಿದ 4 ಚೀತಾ ಇದಾಗಿದೆ. 5 ಮರಿಗಳಿಗೆ ಜನ್ಮ ನೀಡಿರುವ ಚೀತಾವನ್ನು ದಕ್ಷಿಣ ಆಫ್ರಿಕಾದ ತ್ಸ್ವಾಲು ಕಲಹರಿ ರಿಸರ್ವ್ ಫಾರೆಸ್ಟ್‌ನಿಂದ ತರಲಾಗಿತ್ತು. ಕುನೋ ನ್ಯಾಷನಲ್ ಪಾರ್ಕ್‌ನಲ್ಲಿ ಸದ್ಯ ಇರುವ ಚೀತಾಗಳ ಸಂಖ್ಯೆ 26 ಆಗಿದೆ.


">March 10, 2024

ಭಾರತದಲ್ಲಿ ಕಣ್ಮರೆಯಾಗಿದ್ದ ಚೀತಾಗಳ ಸಂತತಿ ಬೆಳೆಸಲು ಪ್ರಾಜೆಕ್ಟ್ ಚೀತಾ ಯೋಜನೆಯಡಿ ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ತರಲಾಗಿದೆ. 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಮೀಬಿಯಾದಿಂದ ಬಂದ 8 ಚೀತಾಗಳನ್ನು ಕುನೋ ನ್ಯಾಷನಲ್ ಪಾರ್ಕ್‌ಗೆ ಬಿಟ್ಟಿದ್ದರು. ನಂತರ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ತರಲಾಗಿತ್ತು. ಆರಂಭದಲ್ಲಿ ಭಾರತದ ವಾತಾವರಣಕ್ಕೆ ಹೊಂದಿಕೊಳ್ಳಲು ಚೀತಾಗಳಿಗೆ ಸವಾಲಾಗಿತ್ತು. ಇದೀಗ ಚೀತಾಗಳ ಸಂಖ್ಯೆ ನಿಧಾನಕ್ಕೆ ಹೆಚ್ಚಾಗುತ್ತಿರೋದು ಸಮಾಧಾನಕಾರ ಸಂಗತಿಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment