newsfirstkannada.com

ಹಾಸನದ ಬೆನ್ನಲ್ಲೇ ಮತ್ತೊಂದು ಕರ್ಮಕಾಂಡ; ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌!

Share :

Published May 1, 2024 at 8:33pm

  ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಅವರ ಖಾಸಗಿ ವಿಡಿಯೋ ವೈರಲ್‌!

  ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ ವಿಡಿಯೋ

  ಸೋಷಿಯಲ್ ಮೀಡಿಯಾದಲ್ಲಿ ಸೆಕ್ಸ್ ವಿಡಿಯೋ ಹಂಚಿದವರ ವಿರುದ್ಧ ಕ್ರಮ

ರಾಮನಗರ: ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿರುವಾಗಲೇ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ ವಿಡಿಯೋ ವೈರಲ್ ಆಗಿದೆ. ರಾಮನಗರ ಪೊಲೀಸ್ ಠಾಣೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ದೂರು ಸಹ ನೀಡಿದ್ದಾರೆ.

ಇದನ್ನೂ ಓದಿ: ‘ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳಿಸಿದ್ರಾ?’- ಪ್ರಜ್ವಲ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ 

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬಂದ ಮೇಲೆ ರಾಮನಗರದಲ್ಲೂ ಅಶ್ಲೀಲ ವಿಡಿಯೋ ಸದ್ದು ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ಹರಿದಾಡುತ್ತಿದೆ.

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ರಿಲೀಸ್​ ಮಾಡಿದ ಕಾರ್ತಿಕ್​ ಮಲೇಷ್ಯಾಗೆ ಹೋದ್ರಾ? HDK ಬಿಚ್ಚಿಟ್ಟ ಸ್ಫೋಟಕ ಮಾಹಿತಿ 

ಖಾಸಗಿ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂಧರ್ ಅವರು ಸಿಇಎನ್ ಪೊಲೀಸ್ ಠಾಣೆಯಲ್ಲಿ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಶೇರ್ ಮಾಡಿರುವವರ ವಿರುದ್ಧ ದೂರು ನೀಡಿದ್ದಾರೆ.

ಕಾಂಗ್ರೆಸ್‌ ಶಾಸಕರ ತೇಜೋವಧೆ ಮಾಡಲು ಕೆಲ ಮಂದಿ ನಕಲಿ ವಿಡಿಯೋವನ್ನು ಎಡಿಟ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸೆಕ್ಸ್ ವಿಡಿಯೋಗಳನ್ನು ಪ್ರಸಾರ ಮಾಡುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್‌ ನಾಯಕರು ದೂರಿನಲ್ಲಿ ಕೋರಿದ್ದಾರೆ. ರಾಮನಗರ ಪೊಲೀಸರು ಸದ್ಯಕ್ಕೆ ಎನ್‌ಸಿಆರ್ ದಾಖಲಿಸಿಕೊಂಡಿದ್ದು, ವಿಚಾರಣೆ ಕೈಗೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನದ ಬೆನ್ನಲ್ಲೇ ಮತ್ತೊಂದು ಕರ್ಮಕಾಂಡ; ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌!

https://newsfirstlive.com/wp-content/uploads/2024/05/Iqbal-Hussain-Ramnagar-Mla.jpg

Load More